ಆಂಧ್ರಪ್ರದೇಶಕ್ಕೆ ಕೇಂದ್ರದಿಂದ ಸಂಪೂರ್ಣ ಸಹಕಾರ: ತಿರುಪತಿಯಲ್ಲಿ ಸಿಎಂ ಜಗನ್ ರೆಡ್ಡಿಗೆ ಮೋದಿ ಭರವಸೆ

ಕೇಂದ್ರ ಹಾಗೂ ರಾಜ್ಯದಲ್ಲಿ ಸ್ಪಷ್ಟ ಬಹುಮತ ಇರುವ ಸರ್ಕಾರ ರಚನೆಯಾಗಿದ್ದು, ವೈಎಸ್ ಆರ್ ಕಾಂಗ್ರೆಸ್ ನಾಯಕ ಜಗನ್ ಮೋಹನ್ ರೆಡ್ಡಿ...

Published: 10th June 2019 12:00 PM  |   Last Updated: 10th June 2019 02:48 AM   |  A+A-


Centre will extend full cooperation to Andhra: PM Modi to CM Jagan Mohan Reddy in Tirupati

ಆಂಧ್ರಪ್ರದೇಶಕ್ಕೆ ಕೇಂದ್ರದಿಂದ ಸಂಪೂರ್ಣ ಸಹಕಾರ: ತಿರುಪತಿಯಲ್ಲಿ ಸಿಎಂ ಜಗನ್ ರೆಡ್ಡಿಗೆ ಮೋದಿ ಭರವಸೆ

Posted By : SBV SBV
Source : Online Desk
ಕೇಂದ್ರ ಹಾಗೂ ರಾಜ್ಯದಲ್ಲಿ ಸ್ಪಷ್ಟ ಬಹುಮತ ಇರುವ ಸರ್ಕಾರ ರಚನೆಯಾಗಿದ್ದು, ವೈಎಸ್ ಆರ್ ಕಾಂಗ್ರೆಸ್ ನಾಯಕ ಜಗನ್ ಮೋಹನ್ ರೆಡ್ಡಿ ಅವರ ನೇತೃತ್ವದಲ್ಲಿ ಆಂಧ್ರಪ್ರದೇಶ ಅಭಿವೃದ್ಧಿ ಪಥದಲ್ಲಿ ಸಾಗಲಿದೆ ಎಂದು ಪ್ರಧಾನಿ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ಜು.09 ರಂದು ಆಂಧ್ರಪ್ರದೇಶದ ತಿರುಪತಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸಾರ್ವಜನಿಕ ಸಭೆಯನ್ನು ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಆಂಧ್ರಪ್ರದೇಶದ ಅಭಿವೃದ್ಧಿಗೆ ವಿಫುಲ ಅವಕಾಶಗಳಿವೆ, ಆಂಧ್ರಪ್ರದೇಶಕ್ಕೆ ಕೇಂದ್ರ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 

ಜಗನ್ ಮೋಹನ್ ರೆಡ್ಡಿ ನಾಯಕತ್ವದಲ್ಲಿ ಆಂಧ್ರಪ್ರದೇಶ ಹೊಸ ರಾಜ್ಯವಾಗುವ ನಿಟ್ಟಿನಲ್ಲಿ ಬೆಳೆಯಲಿದೆ. ಕೇಂದ್ರ ಹಾಗೂ ರಾಜ್ಯಗಳು ಒಟ್ಟಿಗೆ ಕೆಲಸ ಮಾಡಬೇಕು, ಆಗ ಹೊಸ ಭಾರತದ ನಿರ್ಮಾಣ ಸಾಧ್ಯ ಎಂದು ಮೋದಿ ಹೇಳಿದ್ದಾರೆ. 
Stay up to date on all the latest ರಾಷ್ಟ್ರೀಯ news with The Kannadaprabha App. Download now
facebook twitter whatsapp