ಪೇದೆ ಕೆನ್ನೆಗೆ ಬಾರಿಸಿದ ಬಿಜೆಪಿ ಸಂಸದೆ ರೇಖಾ ವರ್ಮಾ ವಿರುದ್ಧ ಎಫ್ ಐ ಆರ್ ದಾಖಲು!

ಉತ್ತರ ಪ್ರದೇಶದ ದೌರಹಾರ ಲೋಕಸಭಾ ಕ್ಷೇತ್ರದ ಸಂಸದೆ ರೇಖಾ ವರ್ಮಾ, ಕರ್ತವ್ಯನಿರತ ಪೊಲೀಸ್ ಪೇದೆಯ ಕೆನ್ನೆಗೆ ಬಾರಿಸಿದ್ದಾರೆ ಎಂಬ ಆರೋಪದ ...
ರೇಖಾ ವರ್ಮಾ
ರೇಖಾ ವರ್ಮಾ
ಲಖೀಮಪುರ: ಉತ್ತರ ಪ್ರದೇಶದ ದೌರಹಾರ ಲೋಕಸಭಾ ಕ್ಷೇತ್ರದ ಸಂಸದೆ ರೇಖಾ ವರ್ಮಾ, ಕರ್ತವ್ಯನಿರತ ಪೊಲೀಸ್ ಪೇದೆಯ ಕೆನ್ನೆಗೆ ಬಾರಿಸಿದ್ದಾರೆ ಎಂಬ ಆರೋಪದ ಹಿನ್ನೆಲಯಲ್ಲಿ ಪೊಲೀಸ್ ಪೇದೆ ಸಂಸದೆ ವಿರುದ್ಧ ದೂರು ದಾಖಲಿಸಿದ್ದಾರೆ.
ಸಂಸದೆಯಾಗಿ ಆಯ್ಕೆಯಾಗಿರುವ ರೇಖಾ ವರ್ಮಾರಿಗೆ ಭಾನುವಾರ ಮೊಹಮ್ಮದಿ ಪಟ್ಟಣದಲ್ಲಿ ಸನ್ಮಾನ ಸಮಾರಂಭವಿತ್ತು. ಕಾರ್ಯಕ್ರಮದಿಂದ ಹಿಂದಿರುಗುತ್ತಿದ್ದ ರಾತ್ರಿ ಸುಮಾರು 11 ಗಂಟೆಗೆ ಸಂಸದೆ ನನ್ನ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಪೇದೆ ಶ್ಯಾಮ್ ಸಿಂಗ್ ಆರೋಪಿಸಿದ್ದಾರೆ.
ಲಖೀಮಪುರದ ಮೊಹಮ್ಮದಿ ಠಾಣೆಯ ಪೇದೆಯಾಗಿರುವ ಶ್ಯಾಮ್ ಸಿಂಗ್ ಪಟ್ಟಣಕ್ಕೆ ಆಗಮಿಸಿದ್ದ ಸಂಸದೆಗೆ ಭದ್ರತಾ ಸಿಬ್ಬಂದಿಯಾಗಿದ್ದರು. ಸಂಜೆ ಕಾರ್ಯಕ್ರಮ ಮುಗಿಸಿ ಸಂಸದೆಯನ್ನು ತಮ್ಮ ಠಾಣಾ ವ್ಯಾಪ್ತಿಯ ಗಡಿ ಪಾರು ಮಾಡಿ ವಂದನೆ ಸಲ್ಲಿಸಿ ಹಿಂದಿರುಗಿದ್ದರು. 
ಕೆಲ ಸಮಯದ ಬಳಿಕ ಫೋನ್ ಕರೆ ಮಾಡಿದ ಸಂಸದೆ ಹಿಂದಿರುಗಿ ಬರುವಂತೆ ಸೂಚಿಸಿದರು. ರೇಖಾ ವರ್ಮಾರ ಆದೇಶದಂತೆ ಹೋದಾಗ ನನ್ನನ್ನು ಕರೆದು ಕಪಾಳಕ್ಕೆ ಬಾರಿಸಿ, ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಶ್ಯಾಮ್ ಸಿಂಗ್ ದೂರಿನಲ್ಲಿ ದಾಖಲಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com