ಪ್ರಧಾನಿ ಮೋದಿ ಭೇಟಿ ಮಾಡಿದ ರಾಜ್ಯಪಾಲ ವಜುಬಾಯಿ ವಾಲಾ

ರಾಜ್ಯಪಾಲ ವಜುಬಾಯಿವಾಲಾ ದೆಹಲಿಯಲ್ಲಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ...

Published: 11th June 2019 12:00 PM  |   Last Updated: 11th June 2019 02:06 AM   |  A+A-


Governer Vajubhai Vala met PM Narendra Modi

ಪಿಎಂ ನರೇಂದ್ರ ಮೋದಿ ಭೇಟಿ ಮಾಡಿದ ರಾಜ್ಯಪಾಲ ವಜುಭಾಯಿ ವಾಲಾ

Posted By : SUD SUD
Source : UNI
ನವದೆಹಲಿ: ರಾಜ್ಯಪಾಲ ವಜುಬಾಯಿವಾಲಾ ದೆಹಲಿಯಲ್ಲಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಕರ್ನಾಟಕದಲ್ಲಿ ಆಡಳಿತಾರೂಢ ಜೆಡಿಎಸ್ – ಕಾಂಗ್ರೆಸ್ ಮೈತ್ರಿ ಸರ್ಕಾರದ ನಡುವಣ ಸಂಬಂಧದಲ್ಲಿ ಏರುಪೇರು ಉಂಟಾಗಿರುವ ಸಂದರ್ಭದಲ್ಲಿ ರಾಜ್ಯಪಾಲರು ಪ್ರಧಾನಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ಮಹತ್ವ ಪಡೆದುಕೊಂಡಿದೆ.

ಬಂಡಾಯ ಶಾಸಕರು ಬಿಜೆಪಿಗೆ ಸೇರ್ಪಡೆಗೊಳ್ಳುವ ಬೆದರಿಕೆವೊಡ್ಡುವ ಮೂಲಕ ಸಚಿವ ಸಂಪುಟದಲ್ಲಿ ಸ್ಥಾನ ಗಿಟ್ಟಿಸಲು ಚೌಕಾಸಿ ನಡೆಸುತ್ತಿದ್ದು, ರಾಜ್ಯ ಸಚಿವ ಸಂಪುಟ ವಿಸ್ತರಣೆ ಇದೇ 14ರ ಶುಕ್ರವಾರ ನಿಗದಿಯಾಗಿದೆ .

ಒಡಿಶಾ ಮುಖ್ಯಮಂತ್ರಿ  ನವೀನ್ ಪಟ್ನಾಯಕ್,  ಅರುಣಾಚಲ ಪ್ರದೇಶ ರಾಜ್ಯಪಾಲ  ಬ್ರಿಗೇಡಿಯರ್ ಬಿಡಿ ಮಿಶ್ರಾ ಅವರೂ ಇಂದು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ಮಾತು ಕತೆ ನಡೆಸಿದರು.
Stay up to date on all the latest ರಾಷ್ಟ್ರೀಯ news with The Kannadaprabha App. Download now
facebook twitter whatsapp