ಇದೀಗ ಸುಪ್ರೀಂ ಕೋರ್ಟ್ ಕೂಡ ಉತ್ತರ ಪ್ರದೇಶ ಸರ್ಕಾರದ ಕ್ರಮವನ್ನು ತೀವ್ರವಾಗಿ ಖಂಡಿಸಿದೆ. ನಾಗರಿಕರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹರಣ ಮಾಡಬಾರದು. ಸಂವಿಧಾನ ನಾಗರೀಕರ ಹಕ್ಕಿಗೆ ಪ್ರಮುಖ್ಯತೆ ನೀಡುತ್ತದೆ. ಯಾವುದೇ ಕಾರಣಕ್ಕೂ ಅದನ್ನು ಉಲ್ಲಂಘಿಸಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಅಂತೆಯೇ ಸಾಮಾಜಿಕ ಮಾಧ್ಯಮಗಳಲ್ಲಿ ಟ್ವೀಟ್ ಮಾಡಿದ್ದರು ಎಂದು ಬಂಧಿಸುವುದು ಎಷ್ಟು ಸೂಕ್ತ, ಯಾವ ಆಧಾರದಲ್ಲಿ ಬಂಧಿಸಲಾಗಿದೆ ಎಂದು ನ್ಯಾಯಾಲಯ ಯುಪಿ ಸರ್ಕಾರವನ್ನು ಪ್ರಶ್ನಿಸಿದೆ. ಸಾಮಾನ್ಯವಾಗಿ ನ್ಯಾಯಾಲಯ ಈ ರೀತಿಯ ಅರ್ಜಿಗಳನ್ನು ವಿಚಾರಣೆಗೆ ಕೈಗೆತ್ತಿಕೊಳ್ಳುವುದಿಲ್ಲ, ಆದರೆ ಒಬ್ಬ ವ್ಯಕ್ತಿಯನ್ನು ಇಷ್ಟೊಂದು ದಿನಗಳ ಕಾಲ ಜೈಲಿನಲ್ಲಿ ಇರಿಸಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ನ್ಯಾಯಾಲಯ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.