ಕೇಂದ್ರ ಸರ್ಕಾರದಿಂದ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಗಿಫ್ಟ್!

ಮುಂದಿನ 5 ವರ್ಷಗಳಲ್ಲಿ ಅಲ್ಪಸಂಖ್ಯಾತ ಸಮುದಾಯದ 5 ಕೋಟಿ ವಿದ್ಯಾರ್ಥಿಗಳಿಗೆ ನರೇಂದ್ರ ಮೋದಿ ಸರ್ಕಾರ ವಿವಿಧ ರೀತಿಯ ವಿದ್ಯಾರ್ಥಿ ವೇತನಗಳನ್ನು ನೀಡುವುದಾಗಿ ಕೇಂದ್ರ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ.
ಮುಕ್ತಾರ್ ಅಬ್ಬಾಸ್ ನಖ್ವಿ
ಮುಕ್ತಾರ್ ಅಬ್ಬಾಸ್ ನಖ್ವಿ
ನವದೆಹಲಿ: ಮುಂದಿನ 5 ವರ್ಷಗಳಲ್ಲಿ ಅಲ್ಪಸಂಖ್ಯಾತ ಸಮುದಾಯದ 5 ಕೋಟಿ ವಿದ್ಯಾರ್ಥಿಗಳಿಗೆ ನರೇಂದ್ರ ಮೋದಿ ಸರ್ಕಾರ ವಿವಿಧ ರೀತಿಯ ವಿದ್ಯಾರ್ಥಿ ವೇತನಗಳನ್ನು ನೀಡುವುದಾಗಿ ಕೇಂದ್ರ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ. 
ಪ್ರೀ ಮೆಟ್ರಿಕ್, ಪೋಸ್ಟ್ ಮೆಟ್ರಿಕ್ ಸೇರಿದಂತೆ ವಿವಿಧ ರೀತಿಯ ಸ್ಕಾಲರ್ ಶಿಪ್ ಗಳು ಶೇ.50 ರಷ್ಟು ವಿದ್ಯಾರ್ಥಿನಿಯರಿಗೆ ಅನ್ವಯವಾಗುವಂತೆ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ದೊರೆಯಲಿದೆ. 
ಅಂತ್ಯೋದಯ ಭವನದಲ್ಲಿ ನಡೆದ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವರು ಮೌಲಾನಾ ಆಝಾದ್ ಎಜುಕೇಶನ್ ಫೌಂಡೇಶನ್ ನ ಆಡಳಿತ ಮಂಡಳಿಯ ಸಭೆ ನಡೆಸಿದ ಸಚಿವರು ಈ ಘೋಷಣೆ ಮಾಡಿದ್ದಾರೆ. ಮೋದಿ ಸರ್ಕಾರ ಕೋಮುವಾದ, ಓಲೈಕೆಯ ಸಮಸ್ಯೆಯನ್ನು ದೂರವಾಗಿಸಿ, ಎಲ್ಲರನ್ನೊಳಗೊಂಡ ಆರೋಗ್ಯಕರ ಬೆಳವಣಿಗೆಯ ವಾತಾವರಣ ಸೃಷ್ಟಿಸಿದೆ ಎಂದು ಮುಕ್ತಾರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com