ಪ್ರಧಾನಿ ಮೋದಿ ಪ್ರಧಾನ ಕಾರ್ಯದರ್ಶಿಯಾಗಿ ನೃಪೇಂದ್ರ ಮಿಶ್ರಾ ಮರು ನೇಮಕ

ನಿರೀಕ್ಷೆಯಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಧಾನ ಕಾರ್ಯದರ್ಶಿಯಾಗಿ ಹಿರಿಯ ನಿವೃತ್ತ ಐಎಎಸ್ ಅಧಿಕಾರಿ ನೃಪೇಂದ್ರ ಮಿಶ್ರಾ ಅವರು ನೇಮಕಗೊಂಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ನವದೆಹಲಿ: ನಿರೀಕ್ಷೆಯಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಧಾನ ಕಾರ್ಯದರ್ಶಿಯಾಗಿ ಹಿರಿಯ ನಿವೃತ್ತ ಐಎಎಸ್ ಅಧಿಕಾರಿ ನೃಪೇಂದ್ರ ಮಿಶ್ರಾ ಅವರು ನೇಮಕಗೊಂಡಿದ್ದಾರೆ.
ಅಂತೆಯೇ ಪ್ರಧಾನ ಮಂತ್ರಿಗಳ ಹೆಚ್ಚುವರಿ ಕಾರ್ಯದರ್ಶಿಯನ್ನಾಗಿ ನಿವೃತ್ತ ಐಎಎಸ್‌ ಅಧಿಕಾರಿ ಡಾ.ಪಿ.ಕೆ.ಮಿಶ್ರಾ ನೇಮಕ ಇಬ್ಬರೂ ಅಧಿಕಾರಿಗಳಿಗೂ ಈ ಬಾರಿ ಕ್ಯಾಬಿನೆಟ್ ಸ್ಥಾನ-ಮಾನ ನೀಡಲಾಗಿದೆ. ಇಬ್ಬರೂ ಐದು ವರ್ಷಗಳ ಅವಧಿಗೆ ಅವರು ಮರುನೇಮಕಗೊಂಡಿದ್ದಾರೆ. ನೇಮಕಾತಿಗಳ ಸಂಪುಟ ಸಮಿತಿ ಈ ಕ್ರಮ ಕೈಗೊಂಡಿದ್ದು, ಮೇ 31ರಿಂದಲೇ ಜಾರಿಗೆ ಬರುವಂತೆ ಈ ಆದೇಶ ಹೊರಡಿಸಲಾಗಿದೆ.
ಈ ಹಿಂದೆ ಕೇಂದ್ರ ಸರ್ಕಾರ ಈ ಹಿಂದಿನ ಎನ್ ಡಿಎ ಸರ್ಕಾರದಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿದ್ದ ಅಜಿತ್ ಧೋವಲ್ ರನ್ನೂ ಕೂಡ ಮುಂದಿನ ಐದು ವರ್ಷಗಳಿಗೆ ಮರು ನೇಮಕ ಮಾಡಿಕೊಂಡಿದ್ದಲ್ಲದೇ ಅವರಿಗೂ ಕ್ಯಾಬಿನೆಟ್ ಸ್ಥಾನಮಾನ ನೀಡಿತ್ತು. ಆ ಮೂಲಕ ಧೋವಲ್ ಸತತ ಎರಡನೇ ಬಾರಿಗೆ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಆಯ್ಕೆಯಾದ ಮೊದಲ ಅಧಿಕಾರಿ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ಕಳೆದ ಸರ್ಕಾರದಲ್ಲಿ ಧೋವಲ್ ಅವರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಲಾಗಿತ್ತು. 
ಪಿಕೆ ಸಿನ್ಹಾ ಅಧಿಕಾರಾವಧಿ ಹೆಚ್ಚಳ
ಇದೇ ವೇಳೆ ಸಂಪುಟ ಕಾರ್ಯದರ್ಶಿ ಪಿಕೆ ಸಿನ್ಹಾ ಅವರ  ಅಧಿಕಾರಾವಧಿಯನ್ನು ಕೇಂದ್ರ ಸರ್ಕಾರ ಮತ್ತೆ 3 ತಿಂಗಳಗಳ ಕಾಲ ಹೆಚ್ಚಿಸಿದ್ದು, ಇದಕ್ಕಾಗಿ ನಿಯಮಗಳಲ್ಲಿ ಕೆಲ ಬದಲಾವಣೆ ತಂದಿದೆ. ಆ ಮೂಲಕ 60 ವರ್ಷದ ಪಿಕೆ ಸಿನ್ಹಾ ಅವರ ಅಧಿಕಾರಾವಧಿ ಇನ್ನೂ ಮೂರು ತಿಂಗಳುಗಳಿಗೆ ಹೆಚ್ಚಳವಾದಂತಾಗಿದೆ. ಆ ಮೂಲಕ ಪಿಕೆ ಸಿನ್ಹಾ ಅತ್ಯಂತು ಸುಧೀರ್ಘ ಅವಧಿಯವರೆಗೂ ಸೇವೆ ಸಲ್ಲಿಸಿದ ಮೊದಲ ಅಧಿಕಾರಿ ಎಂಬ ಕೀರ್ತಿಗೂ ಭಾಜನರಾಗಲಿದ್ದಾರೆ. ಇನ್ನುಸಿನ್ಹಾ ಅವರ ಸೇವಾವಧಿಯಲ್ಲಿ ಇದು ಮೂರನೇ ಬಾರಿಯ ಅಧಿಕಾರಾವಧಿ ಹೆಚ್ಚಳವಾಗಿದೆ. ಈ ಹಿಂದೆ 2017 ಮತ್ತು 218ರಲ್ಲಿ ಕೇಂದ್ರ ಸರ್ಕಾರ ಪಿಕೆ ಸಿನ್ಹಾ ಅವರ ಅಧಿಕಾರಾವಧಿ ಹೆಚ್ಚಳ ಮಾಡಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com