ಜೂ.13, 14ರಂದು ಬಿಜೆಪಿ ಸಭೆ, ಲೋಕಸಭಾ ಚುನಾವಣೆಗೆ ಸಂಬಂಧಿಸಿದ ಎಲ್ಲಾ ಮಾಹಿತಿ ಸಮೇತ ಬರುವಂತೆ ಶಾ ಸೂಚನೆ

ಪಕ್ಷದ ಚುನಾವಣೆ ಆರಂಭಿಸುವ ಉದ್ದೇಶದಿಂದ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಜೂನ್ 13 ಮತ್ತು 14 ರಂದು ಎರಡು ದಿನಗಳ ಕಾಲ ಕೇಂದ್ರ ಮತ್ತು ರಾಜ್ಯ...
ಅಮಿತ್ ಶಾ
ಅಮಿತ್ ಶಾ
ನವದೆಹಲಿ: ಪಕ್ಷದ ಚುನಾವಣೆ ಆರಂಭಿಸುವ ಉದ್ದೇಶದಿಂದ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಜೂನ್ 13 ಮತ್ತು 14 ರಂದು ಎರಡು ದಿನಗಳ ಕಾಲ ಕೇಂದ್ರ ಮತ್ತು ರಾಜ್ಯ ನಾಯಕರ ಸಭೆ ಕರೆದಿದ್ದು, ಸಭೆಯಲ್ಲಿ ಕಳೆದ ಲೋಕಸಭೆ ಚುನಾವಣೆ ಫಲಿತಾಂಶದ ಬಗ್ಗೆ ಸುದೀರ್ಘ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.
ಪತ್ರಗಳು ಸೇರಿದಂತೆ ಕಳೆದ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಸಂಬಂಧಿಸಿದ ಎಲ್ಲಾ ಮಾಹಿತಿಯ ಜತೆ ಜೂನ್ 13ರಂದು ಸಭೆಗೆ ಆಗಮಿಸುವಂತೆ ಅಮಿತ್ ಶಾ ಅವರು ಎಲ್ಲಾ ರಾಜ್ಯಗಳ ಬಿಜೆಪಿ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಪದಾಧಿಕಾರಿಗಳಿಗೆ ಸೂಚಿಸಿದ್ದಾರೆ. ಅಲ್ಲದೆ ಕಳೆದ ಲೋಕಸಭೆ ಚುನಾವಣೆಯಲ್ಲಿ ಪ್ರತಿ ಲೋಕಸಭಾ ಕ್ಷೇತ್ರದಲ್ಲೂ ಪಕ್ಷದ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದವರ ಹೆಸರಗಳನ್ನು ಪಟ್ಟಿ ಮಾಡುವಂತೆ ಸೂಚಿಸಲಾಗಿದೆ.
ಜೂನ್ 13 ಮತ್ತು 14 ರಂದು ದೆಹಲಿಯಲ್ಲಿ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಕರ್ನಾಟಕ ಸೇರಿದಂತೆ ನಾಲ್ಕು ರಾಜ್ಯಗಳ ಬಿಜೆಪಿ ಅಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚೆ ನಡೆಯುವ ನಿರೀಕ್ಷೆ ಇದೆ.
ತಾಲೂಕ ಹಾಗೂ ಜಿಲ್ಲಾ ಮಟ್ಟದಿಂದ ಸಾಂಸ್ಥಿಕ ಚುನಾವಣೆಗಳನ್ನು ನಡೆಸಲು ಉದ್ದೇಶಿಸಿದ್ದು, ಈ ಸಂಬಂಧ ಎರಡು ಸಭೆಗಳನ್ನು ಕರೆಯಲಾಗಿದೆ ಪಕ್ಷದ ಸಂವಿಧಾನಕ್ಕೆ ಅನುಗುಣವಾಗಿ ಚುನಾವಣಾ ಪ್ರಕ್ರಿಯೆಯನ್ನು ಮೂರು ತಿಂಗಳೊಳಗೆ ಮುಕ್ತಾಯಗೊಳಿಸಲಾಗುವುದು ಎಂದು ಹಿರಿಯ ಬಿಜೆಪಿ ನಾಯಕರೊಬ್ಬರು ತಿಳಿಸಿದ್ದಾರೆ.
ಲೋಕಸಭಾ ಚುನಾವಣೆ ಬಳಿಕ ಕರ್ನಾಟಕ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರ ಬದಲಾವಣೆ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಜೂನ್ 13ರಂದು ನಡೆಯುವ ಸಭೆಯಲ್ಲಿ ಅಮಿತ್ ಶಾ ಅವರು ಈ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com