ನೀತಿ ಆಯೋಗ ಸಭೆ: ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನಕ್ಕೆ ಜಗನ್ ಒತ್ತಾಯ

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಇಂದು ನಡೆದ ಐದನೇ ನೀತಿ ಆಯೋಗದ ಸಭೆಯಲ್ಲಿ ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಒತ್ತಾಯಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಇಂದು ನಡೆದ ಐದನೇ ನೀತಿ ಆಯೋಗದ ಸಭೆಯಲ್ಲಿ ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಒತ್ತಾಯಿಸಿದ್ದಾರೆ.
ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ಅಗತ್ಯ ಜೀವಸೆಲೆಯಾಗಿದೆ ಎಂದು ಹೇಳಿದ ಜಗನ್, ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ಒದಗಿಸಿದರೆ ಇತರ ರಾಜ್ಯಗಳು ಬೇಡಿಕೆ ಇಡುತ್ತವೆ ಎಂಬ ವದಂತಿಯ ವಾದಗಳಿಂದ ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನ ಮಾಡಿಲ್ಲ ಎಂಬ ಅನೇಕ ವದಂತಿಗಳನ್ನು ಕೇಳಿ ನಿರಾಸರಾಗಿದ್ದೇವೆ ಎಂದು  ಸಭೆಯಲ್ಲಿ ಜಗನ್ ಹೇಳಿದ್ದಾರೆ.
ರಾಜ್ಯವನ್ನು ವಿಭಜಿಸುವಾಗ  ಆರ್ಥಿಕ ಮತ್ತು ಆರ್ಥಿಕ ತೊಂದರೆಗಳನ್ನು ಸರಿದೂಗಿಸಲು ವಿಶೇಷ ವರ್ಗದ ಸ್ಥಾನಮಾನವನ್ನು ನೀಡಲಾಗುವುದು ಇದನ್ನು ಪ್ರತಿನಿಧಿಸುವ ಎಲ್ಲಾ ರಾಜ್ಯಗಳ ಆಡಳಿತರೂಢ ಹಾಗೂ ಪ್ರತಿಪಕ್ಷಗಳು ಬೆಂಬಲಿಸಿವೆ ಎಂದು ತಿಳಿಸಿದರು.
ಆಂಧ್ರ ಪ್ರದೇಶದ ಹಿಂದಿನ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನೇತೃತ್ವದ ದುರಾಡಳಿತ ಹಾಗೂ ಸಂಸ್ಥೆಗಳ ಭ್ರಷ್ಟಾಚಾರವನ್ನು ಟೀಕಿಸಿದ ಜಗನ್,   ಆಂಧ್ರ ಪ್ರದೇಶದಲ್ಲಿ ನಿರುದ್ಯೋಗ ಪ್ರಮಾಣ ಅಧಿಕವಾಗಿದ್ದು, ಮೂಲಸೌಕರ್ಯ ಹಾಗೂ ಕೈಗಾರಿಕಾ ರಂಗದಲ್ಲಿ ಹೂಡಿಕೆ ಕೊರತೆ ಇದೆ.  ಸಾರ್ವಜನಿಕ ಶಿಕ್ಷಣ ಹಾಗೂ ಆರೋಗ್ಯ ವ್ಯವಸ್ಥೆ ಕುಸಿದಿದ್ದು, ಬೊಕ್ಕಸ ಬರಿದಾಗಿದೆ ಎಂದು ವಿವರಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com