ವೈದ್ಯರ ಪ್ರತಿಭಟನೆ: ಸುಪ್ರೀಂ ಕೋರ್ಟ್ ನಲ್ಲಿ ನಾಳೆ ವಿಚಾರಣೆ

ದೇಶಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಸುರಕ್ಷತೆ ಮತ್ತು ಭದ್ರತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ...
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್
ನವದೆಹಲಿ: ದೇಶಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಸುರಕ್ಷತೆ ಮತ್ತು ಭದ್ರತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಾಳೆ ಕೈಗೆತ್ತಿಕೊಳ್ಳಲಿದೆ.
ಅರ್ಜಿದಾರ ಅಡ್ವಕೇಟ್ ಅಲೋಕ್ ಶ್ರೀವಾಸ್ತವ ಅವರ ಪರ ವಕೀಲರು ತುರ್ತು ವಿಚಾರಣೆ ನಡೆಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಪರಿಶೀಲಿಸಿದ ನ್ಯಾಯಮೂರ್ತಿಗಳಾದ ದೀಪಕ್ ಗುಪ್ತಾ ಮತ್ತು ಸೂರ್ಯ ಕಾಂತ್ ಅವರನ್ನೊಳಗೊಂಡ ರಜಾಪೀಠ, ನಾಳೆ ವಿಚಾರಣೆ ನಡೆಸಲು ತೀರ್ಮಾನಿಸಿದೆ.
ಪಶ್ಚಿಮ ಬಂಗಾಳ ಸೇರಿದಂತೆ ದೇಶಾದ್ಯಂತ ವೈದ್ಯರ ಪ್ರತಿಭಟನೆ ನಡೆಯುತ್ತಿರುವ ಹಿನ್ನಲೆಯಲ್ಲಿ ಪ್ರತಿಭಟನೆ ನಡೆಯುತ್ತಿರುವುದನ್ನು ಕಂಡು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು.
ದೇಶಾದ್ಯಂತ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರುಗಳ ಭದ್ರತೆ ಮತ್ತು ರಕ್ಷಣೆಗೆ ಸರ್ಕಾರ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಬೇಕೆಂದು ಕೇಂದ್ರ ಗೃಹ ಸಚಿವಾಲಯ ಆರೋಗ್ಯ ಮತ್ತು ಪಶ್ಚಿಮ ಬಂಗಾಳ ಸರ್ಕಾರಗಳಿಗೆ ಆದೇಶ ನೀಡಬೇಕೆಂದು ಅರ್ಜಿದಾರರು ಮನವಿ ಮಾಡಿಕೊಂಡಿದ್ದಾರೆ.
ದೇಶಾದ್ಯಂತ ವೈದ್ಯರು ಪ್ರತಿಭಟನೆಯಲ್ಲಿ ತೊಡಗಿರುವುದರಿಂದ ಆರೋಗ್ಯ ಸೇವೆ ಸರ್ಕಾರಿ ಆಸ್ಪತ್ರೆಗಳಲ್ಲಿ ವ್ಯತ್ಯಯವಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com