ಬಿಜೆಪಿ ಕಾರ್ಯಾಧ್ಯಕ್ಷರಾಗಿ ಜೆಪಿ ನಡ್ಡಾ ನೇಮಕ, ಅಧ್ಯಕ್ಷರಾಗಿ ಅಮಿತ್ ಶಾ ಮುಂದುವರಿಕೆ

ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಜೆಪಿ ನಡ್ಡಾ ಅವರು ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಸೋಮವಾರ ನೇಮಕಗೊಂಡಿದ್ದಾರೆ....
ಜೆಪಿ ನಡ್ಡಾ ಅವರನ್ನು ಅಭಿನಂದಿಸುತ್ತಿರುವ ಪ್ರಧಾನಿ ಮೋದಿ
ಜೆಪಿ ನಡ್ಡಾ ಅವರನ್ನು ಅಭಿನಂದಿಸುತ್ತಿರುವ ಪ್ರಧಾನಿ ಮೋದಿ
ನವದೆಹಲಿ: ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಜೆಪಿ ನಡ್ಡಾ ಅವರು ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಸೋಮವಾರ ನೇಮಕಗೊಂಡಿದ್ದಾರೆ.
ಇಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ನಡೆದ ಪಕ್ಷದ ಸಂಸದೀಯ ಮಂಡಳಿಯ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಭೆಯ ಬಳಿಕ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ತಿಳಿಸಿದ್ದಾರೆ.
ಅಮಿತ್ ಶಾ ಅವರ ನೇತೃತ್ವದಲ್ಲಿ ಬಿಜೆಪಿ ಹಲವು ಚುನಾವಣೆಗಳನ್ನು ಗೆದ್ದಿದೆ. ಆದರೂ ಅವರು ಕೇಂದ್ರ ಗೃಹ ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಬೇರೆಯವರನ್ನು ನೇಮಕ ಮಾಡಲು ಬಯಸಿದ್ದರು. ಅಂತಿಮವಾಗಿ ಬಿಜೆಪಿ ಸಂಸದೀಯ ಮಂಡಳಿ ಜೆಪಿ ನಡ್ಡಾ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದೆ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.
ಅಮಿತ್ ಶಾ ಅವರು ರಾಷ್ಟ್ರೀಯ ಅಧ್ಯಕ್ಷರಾಗಿ ಮುಂದುವರೆಯಲಿದ್ದಾರೆ ಎಂದು ಸಿಂಗ್ ತಿಳಿಸಿದ್ದಾರೆ.
ಅಮಿತ್ ಶಾ ಅವರು ಕೇಂದ್ರ ಗೃಹ ಸಚಿವ ಸ್ಥಾನದ ಜತೆಗೆ ಪಕ್ಷದ ಅಧ್ಯಕ್ಷ ಹುದ್ದೆಯಲ್ಲೂ ಮುಂದುವರಿಯುತ್ತಿರುವುದರಿಂದ 'ಒಬ್ಬರಿಗೆ ಒಂದೇ ಹುದ್ದೆ' ಎನ್ನುವ ಪಕ್ಷದ ಆಂತರಿಕ ನಿಯಮ ಉಲ್ಲಂಘನೆಯಾಗಲಿದೆ. ಆದರೆ ನಿಯಮಕ್ಕಿಂತಲೂ ಪಕ್ಷದ ಹಿತ ಮುಖ್ಯ ಎಂದು ಪ್ರಮುಖರು ಸಮರ್ಥಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com