ಒಂದು ರಾಷ್ಟ್ರ ಒಂದು ಚುನಾವಣೆ: ಪ್ರಧಾನಿ ಮೋದಿ ನೇತೃತ್ವದ ಸರ್ವಪಕ್ಷ ಸಭೆಗೆ ಪ್ರಮುಖ ಪ್ರತಿಪಕ್ಷಗಳು ಗೈರು

ಸಂಸತ್ತಿನ ಬಜೆಟ್ ಅಧಿವೇಶನಕ್ಕೆ ಮುಂಚಿತವಾಗಿ 'ಒಂದು ರಾಷ್ಟ್ರ ಒಂದು ಚುನಾವಣೆ' ಸೇರಿದಂತೆ ಹಲವು ಪ್ರಮುಖ ವಿಚಾರಗಳ ಬಗ್ಗೆ ಸಮಾಲೋಚನೆ ಮಾಡಲು ಪ್ರಧಾನಿ ಅಧ್ಯಕ್ಷತೆಯಲ್ಲಿ....
'ಒಂದು ರಾಷ್ಟ್ರ ಒಂದು ಚುನಾವಣೆ' ಚರ್ಚೆಗ ಪ್ರಧಾನಿ ನೇತೃತ್ವದ ಸರ್ವಪಕ್ಷ ಸಭೆ
'ಒಂದು ರಾಷ್ಟ್ರ ಒಂದು ಚುನಾವಣೆ' ಚರ್ಚೆಗ ಪ್ರಧಾನಿ ನೇತೃತ್ವದ ಸರ್ವಪಕ್ಷ ಸಭೆ
ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನಕ್ಕೆ ಮುಂಚಿತವಾಗಿ 'ಒಂದು ರಾಷ್ಟ್ರ ಒಂದು ಚುನಾವಣೆ' ಸೇರಿದಂತೆ ಹಲವು ಪ್ರಮುಖ ವಿಚಾರಗಳ ಬಗ್ಗೆ ಸಮಾಲೋಚನೆ ಮಾಡಲು ಪ್ರಧಾನಿ ಅಧ್ಯಕ್ಷತೆಯಲ್ಲಿ ಇಂದು ಸರ್ವ ಪಕ್ಷ ಸಭೆ ಕರೆಯಲಾಗಿದ್ದರೂ, ಈ ಸಭೆಯಿಂದ ಬಹಳಷ್ಟು ಪಕ್ಷಗಳು  ದೂರ ಉಳಿಯಲು ತೀರ್ಮಾನಿಸಿವೆ. 
ನಾಳೆ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಸಂಸತ್ತಿನ ಉಭಯ ಸದನಗಳ ಸದಸ್ಯರನ್ನು ಉದ್ಧೇಶಿಸಿ ಭಾಷಣ ಮಾಡಲಿರುವ ಹಿನ್ನಲೆಯಲ್ಲಿ  ಈ ಸಭೆಗೆ ಹೆಚ್ಚಿನ ಮಹತ್ವ ಬಂದಿದೆ.
ಸುಗಮ ಸಂಸತ್ ಕಲಾಪಕ್ಕೆ ಸಹಕಾರ ಕೋರುವ ನಿಟ್ಟಿನಲ್ಲಿ  ಪ್ರಧಾನಿ ಅವರು  ಎಲ್ಲಾ ರಾಜಕೀಯ ಪಕ್ಷಗಳ ನಾಯಕರ ಜೊತೆ ಸಭೆ ನಡೆಸಲಿದ್ದಾರೆ. ಒಂದು ರಾಷ್ಟ್ರ, ಒಂದು ಚುನಾವಣೆ; ಸ್ವಾತಂತ್ರ್ಯದ 75 ನೇ ವರ್ಷದಲ್ಲಿ ಹೊಸ ಭಾರತ ನಿರ್ಮಾಣ, ರಾಷ್ಟ್ರಪಿತ  ಮಹಾತ್ಮ ಗಾಂಧಿಯವರ 150ನೇ  ಹುಟ್ಟುಹಬ್ಬ ಮತ್ತು ಮಹತ್ವಾಕಾಂಕ್ಷೆಯ ಜಿಲ್ಲೆಗಳ ಅಭಿವೃದ್ಧಿ ಕುರಿತು ಸಭೆಯಲ್ಲಿ ಸಮಾಲೋಚನೆ ನಡೆಸುವ ಸಾಧ್ಯತೆಯಿದೆ ಎನ್ನಲಾಗಿದೆ. 
ಸರ್ವಪಕ್ಷ ಸಭೆಯಲ್ಲಿ ಭಾಗವಹಿಸದಿರಲು ಕಾಂಗ್ರೆಸ್ ನಿರ್ಧರಿಸಿದೆ ಸಂಸತ್ ಭವನದಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಮುಖಂಡ ಗೌರವ್ ಗೊಗೊಯ್,  ಪಕ್ಷದ ಪ್ರತಿನಿಧಿಗಳು ಸಭೆಗೆ ಹೋಗುತ್ತಿಲ್ಲ ಎಂದು ಸ್ಪಷ್ಟಪಡಿಸಿದರು. 
ಪ್ರಧಾನಿ ಕರೆದಿರುವ ಸರ್ವಪಕ್ಷ ಸಭೆಯಲ್ಲಿ ಕಾಂಗ್ರೆಸ್ ನಾಯಕರು ಭಾಗವಹಿಸುತ್ತಿಲ್ಲ ಎಂದು ಪಕ್ಷದ ಮತ್ತೊಬ್ಬ ಸಂಸದ ಕೆ.ಸುರೇಶ್ ಸುದ್ದಿಗಾರರಿಗೆ ತಿಳಿಸಿದರು. 
ಕಾಂಗ್ರೆಸ್ ಹೊರತುಪಡಿಸಿ, ಇತರ ವಿರೋಧ ಪಕ್ಷಗಳಾದ ಬಿಎಸ್ ಪಿ,  ಡಿಎಂಕೆ, ಟಿಆರ್ ಎಸ್  ಟಿಡಿಪಿ, ಎಎಪಿ ಕೂಡ ಸಭೆಯಿಂದ ದೂರ ಉಳಿಯುವುದಾಗಿ ಹೇಳಿಕೊಂಡಿವೆ.    
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಎಂಕೆ ಅಧ್ಯಕ್ಷ ಎಂ.ಕೆ.ಸ್ಟಾಲಿನ್, ಟಿ ಆರ್ ಎಸ್  ಮುಖ್ಯಸ್ಥ ಕೆ ಚಂದ್ರಶೇಖರ್ ರಾವ್, ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಸಭೆಯಲ್ಲಿ ಭಾಗವಹಿಸುತ್ತಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com