ಹಿಮಾಚಲ ಪ್ರದೇಶ: ಕಣಿವೆಗೆ ಉರುಳಿದ ಬಸ್, ಸಾವಿನ ಸಂಖ್ಯೆ 44ಕ್ಕೆ ಏರಿಕೆ

ಹಿಮಾಚಲ ಪ್ರದೇಶದಲ್ಲಿ ನಿನ್ನೆ ಸಂಭವಿಸಿದ ಖಾಸಗಿ ಬಸ್ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 44ಕ್ಕೆ ಏರಿಕೆಯಾಗಿದ್ದು, ಇನ್ನೂ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎನ್ನಲಾಗಿದೆ.
ಕಣಿವೆಗೆ ಉರುಳಿದ ಬಸ್
ಕಣಿವೆಗೆ ಉರುಳಿದ ಬಸ್
ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ನಿನ್ನೆ ಸಂಭವಿಸಿದ ಖಾಸಗಿ ಬಸ್ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 44ಕ್ಕೆ ಏರಿಕೆಯಾಗಿದ್ದು, ಇನ್ನೂ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎನ್ನಲಾಗಿದೆ.
ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಕಣಿವೆಗೆ ಉರುಳಿದ್ದು, ಪರಿಣಾಮ ಹತ್ತಾರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪೊಲೀಸ್ ಮೂಲಗಳು ತಿಳಿಸಿರುವಂತೆ ಈ ವರೆಗೂ ದುರಂತದಲ್ಲಿ 44 ಮಂದಿ ಸಾವನ್ನಪ್ಪಿದ್ದು, ಬಸ್ ನಲ್ಲಿ 70 ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಪ್ರತ್ಯಕ್ಷ ದರ್ಶಿಗಳು ನೀಡಿರುವ ಮಾಹಿತಿಯಂತೆ ಸಾಮರ್ಥ್ಯಕ್ಕಿಂತ ಹೆಚ್ಚಿನ ಪ್ರಯಾಣಿಕರು ಬಸ್ ನಲ್ಲಿ ಪ್ರಯಾಣಿಸುತ್ತಿದ್ದರು. ಜಾಗ ಸಾಲದೇ ಬಸ್ ಟಾಪ್ ಮೇಲೂ ಹತ್ತಿ ಕುಳಿತಿದ್ದರು. ಹೀಗಾಗಿಯ ಬಸ್ ಚಾಲಕನ ನಿಯಂತ್ರಣ ತಪ್ಪಿ ಕಣಿವೆಗೆ ಉರುಳಿದೆ ಎಂದು ಹೇಳಲಾಗುತ್ತಿದೆ.
ಬಸ್ ಕುಲ್ಲು ಜಿಲ್ಲೆಯಿಂದ ಗಡ ಗುಶೈನಿಯತ್ತ ಪ್ರಯಾಣಿಸುತ್ತಿತ್ತು ಎನ್ನಲಾಗಿದೆ.
ಪ್ರಧಾನಿ ಮೋದಿ ಕಂಬನಿ
ಇನ್ನು ದುರಂತಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಕಂಬನಿ ಮಿಡಿದಿದ್ದು, ಈ ಕುರಿತಂತೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ಸಾವಿಗೀಡಾದವರ ಆತ್ಮಕ್ಕೆ ಶಾಂತಿ ಕೋರಿದ್ದಾರೆ. ಅಲ್ಲದೆ ಸಂತ್ರಸ್ಥರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಅಂತೆಯೇ ಸಂತ್ರಸ್ಥರಿಗೆ ಅಗತ್ಯವಾದ ಎಲ್ಲ ನೆರವೂ ನೀಡುವಂತೆ ಹಿಮಾಚಲ ಪ್ರದೇಶ ಸರ್ಕಾರಕ್ಕೆ ಮೋದಿ ಸೂಚಿಸಿದ್ದು, ಈ ಸಂಬಂಧ ಸರ್ಕಾರಕ್ಕೆ ಅಗತ್ಯವಿರುವ ನೆರವು ಕೇಂದ್ರ ಸರ್ಕಾರ ನೀಡಲಿದೆ ಎಂದು ಟ್ವೀಟ್ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com