ಯೋಗ ದಿನಾಚರಣೆಗೆ ಮಧ್ಯಪ್ರದೇಶ ಸಿಎಂ ಕಮಲ್ ನಾಥ್ ಗೈರು: ವ್ಯಾಪಕ ಟೀಕೆ

ದೇಶಾದ್ಯಂತ ಯೋಗ ದಿನ ಆಚರಣೆ ಮಾಡಲಾಗುತ್ತಿದೆ. ಆದರೆ ಮಧ್ಯಪ್ರದೇಶ ಸಿಎಂ ಕಮಲ್ ನಾಥ್ ಮಾತ್ರ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ.

Published: 21st June 2019 12:00 PM  |   Last Updated: 21st June 2019 12:11 PM   |  A+A-


Kamal Nath misses yoga day event, Shivraj says shows his narrow mindset

ಯೋಗ ದಿನಾಚರಣೆಗೆ ಮಧ್ಯಪ್ರದೇಶ ಸಿಎಂ ಕಮಲ್ ನಾಥ್ ಗೈರು: ವ್ಯಾಪಕ ಟೀಕೆ

Posted By : SBV
Source : IANS
ಭೋಪಾಲ್: ದೇಶಾದ್ಯಂತ ಯೋಗ ದಿನ ಆಚರಣೆ ಮಾಡಲಾಗುತ್ತಿದೆ. ಆದರೆ ಮಧ್ಯಪ್ರದೇಶ ಸಿಎಂ ಕಮಲ್ ನಾಥ್  ಮಾತ್ರ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ. 

ಮಧ್ಯಪ್ರದೇಶದ ರಾಜಧಾನಿ ಭೋಪಾಲ್ ನ ಲಾಲ್ ಪರೇಡ್ ಗ್ರೌಂಡ್ ನಲ್ಲಿ ಆಯೋಜನೆಯಾಗಿದ್ದ ಅಂತಾರಾಷ್ಟ್ರೀಯ ಯೋಗ ದಿನ  ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಭಾಗವಹಿಸಬೇಕಿತ್ತು. 

ಮುಖ್ಯಮಂತ್ರಿಗಳ ನಡೆಗೆ ಟೀಕೆ ವ್ಯಕ್ತವಾಗುತ್ತಿದ್ದು, ಮಾಜಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಟ್ವಿಟರ್ ನಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಕಮಲ್ ನಾಥ್ ಅವರು ಯೋಗ ದಿನಾಚರಣೆಯಲ್ಲಿ ಭಾಗವಹಿಸುವ ಮೂಲಕ ರಾಜ್ಯದ ಜನರಿಗೆ ಯೋಗ ಅಭ್ಯಾಸ ಮಾಡಿ ಆರೋಗ್ಯ ಉತ್ತಮವಾಗಿರಿಸಿಕೊಳ್ಳಲು ಉತ್ತೇಜನ ನೀಡಬಹುದಾಗಿತ್ತು. ಓರ್ವ ಮುಖ್ಯಮಂತ್ರಿಯ ಕೆಲಸ ಕೇವಲ ಆಡಳಿತವಷ್ಟೇ ಅಲ್ಲ, ರಾಜ್ಯಕ್ಕೆ ಮಾರ್ಗದರ್ಶನ ನೀಡುವುದೂ ಹೌದು, ಆದರೆ ಕಮಲ್ ನಾಥ್ ಅವರ ಇಂದಿನ ನಡೆ ಅವರ ಸಂಕುಚಿತ ಮನಸ್ಥಿತಿಯನ್ನು ತೋರುತ್ತದೆ ಎಂದು ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ. 
Stay up to date on all the latest ರಾಷ್ಟ್ರೀಯ news
Poll
Farmers_ride_tractors1

ರೈತರು ದೆಹಲಿಯಲ್ಲಿ ತಮ್ಮ ಗಣರಾಜ್ಯೋತ್ಸವ ದಿನದ ಟ್ರಾಕ್ಟರ್ ರ್ಯಾಲಿಯನ್ನು ನಿಲ್ಲಿಸಬೇಕೇ?


Result
ಹೌದು
ಬೇಡ
flipboard facebook twitter whatsapp