ಉತ್ತರ ಪ್ರದೇಶ: ಎಲ್ಲಾ ಜಿಲ್ಲಾ ಸಮಿತಿಗಳನ್ನು ವಿಸರ್ಜಿಸಿದ ಕಾಂಗ್ರೆಸ್

ಕಳೆದ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ಹೀನಾಯವಾಗಿ ಸೋಲು ಅನುಭವಿಸಿದ ಕಾಂಗ್ರೆಸ್‌, ರಾಜ್ಯದ ಎಲ್ಲಾ ಜಿಲ್ಲಾ ಸಮಿತಿಗಳನ್ನು ಸೋಮವಾರ...
ರಾಹುಲ್ ಗಾಂಧಿ
ರಾಹುಲ್ ಗಾಂಧಿ
ನವದೆಹಲಿ: ಕಳೆದ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ಹೀನಾಯವಾಗಿ ಸೋಲು ಅನುಭವಿಸಿದ ಕಾಂಗ್ರೆಸ್‌, ರಾಜ್ಯದ ಎಲ್ಲಾ ಜಿಲ್ಲಾ ಸಮಿತಿಗಳನ್ನು ಸೋಮವಾರ ವಿಸರ್ಜಿಸಿದೆ.
‌ಹಿರಿಯ ಮುಖಂಡ ಅಜಯ್ ಕುಮಾರ್ ಲಲ್ಲು ಅವರನ್ನು ಉತ್ತರ ಪ್ರದೇಶ ಕಾಂಗ್ರೆಸ್ ಉಸ್ತುವಾರಿಯನ್ನಾಗಿ ಆಯ್ಕೆ ಮಾಡಲಾಗಿದ್ದು, ರಾಜ್ಯದ ಎಲ್ಲಾ ಜಿಲ್ಲಾ ಕಾಂಗ್ರೆಸ್ ಸಮಿತಿಗಳನ್ನು ತಕ್ಷಣವೇ ಜಾರಿಗೆ ಬರುವಂತೆ ವಿಸರ್ಜಿಸಲಾಗಿದೆ. ಈ ಮೂಲಕ ಲೋಕಸಭೆಯಲ್ಲಿ ಪಕ್ಷದ ಪರವಾಗಿ ಕೆಲಸ ಮಾಡದ ಪದಾಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾಗಿದೆ.
ಈ ಸಂಬಂಧ ಉತ್ತರ ಪ್ರದೇಶ ಪೂರ್ವ ಮತ್ತು ಪಶ್ಚಿಮ ವಿಭಾಗದ ಪ್ರಧಾನ ಕಾರ್ಯದರ್ಶಿಗಳಾದ ಜ್ಯೋತಿರಾದಿತ್ಯ ಸಿಂದ್ಯಾ ಹಾಗೂ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಸಲ್ಲಿಸಿದ್ದ ಪ್ರಸ್ತಾವವನ್ನು ಎಐಸಿಸಿ ಜಾರಿಗೊಳಿಸಿದೆ ಎಂದು ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶ 89 ಸ್ಥಾನಗಳ ಪೈಕಿ ಕಾಂಗ್ರೆಸ್ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪ್ರತಿನಿಧಿಸುವ ರಾಯ್ ಬರೇಲಿಯಲ್ಲಿ ಮಾತ್ರ ಗೆಲುವು ಸಾಧಿಸಿತ್ತು. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸಹ ಸ್ಮೃತಿ ಇರಾನಿ ಅವರ ವಿರುದ್ಧ ಸೋಲು ಅನುಭವಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com