ಅಧಿಕೃತವಾಗಿ ಬಿಜೆಪಿ ಸೇರಿದ ವಿದೇಶಾಂಗ ಸಚಿವ ಎಸ್ ಜೈಶಂಕರ್

ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಸೋಮವಾರ ಅಧಿಕೃತವಾಗಿ ಬಿಜೆಪಿ ಸೇರಿದರು.
ಎಸ್ ಜೈಶಂಕರ್
ಎಸ್ ಜೈಶಂಕರ್
ನವದೆಹಲಿ: ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಸೋಮವಾರ ಅಧಿಕೃತವಾಗಿ ಬಿಜೆಪಿ ಸೇರಿದರು.
ಇಂದು ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಕಾರ್ಯಾಧ್ಯಕ್ಷ ಜೆಪಿ ನಡ್ಡಾ ಅವರ ನೇತೃತ್ವದಲ್ಲಿ ಮಾಜಿ ವಿದೇಶಾಂಗ ಕಾರ್ಯದರ್ಶಿ ಜೈಶಂಕರ್ ಅವರು ಬಿಜೆಪಿ ಸೇರಿದರು.
ಜೈಶಂಕರ್ ಅವರು ಮೇ 30ರಂದು ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದರು.
ಸಂಸತ್ ಗೆ ಆಯ್ಕೆಯಾಗದೇ ನೇರವಾಗಿ ಸಚಿವರಾಗಿರುವ ಜೈಶಂಕರ್ ಅವರು ಆರು ತಿಂಗಳಲ್ಲೇ ಸಂಸತ್ ಸದಸ್ಯರಾಗಬೇಕಿರುವುದರಿಂದ ಗುಜರಾತ್ ನಿಂದ ರಾಜ್ಯಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com