ರಾಜಸ್ಥಾನ ಬಿಜೆಪಿ ಅಧ್ಯಕ್ಷ ಮದನ್ ಲಾಲ್ ಸೈನಿ ನಿಧನ: ಮೋದಿ, ಅಮಿತ್ ಶಾ ಸಂತಾಪ

ಏಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಜಸ್ಥಾನ ಬಿಜೆಪಿ ಅಧ್ಯಕ್ಷ ಮದನ್ ಲಾಲ್ ಸೈನಿ ನಿಧನರಾಗಿದ್ದಾರೆ. ರಾಜ್ಯಸಭಾ ಸದಸ್ಯರೂ ಆಗಿದ್ದ ಮದನ್ ಲಾಲ್ ಸೈನಿಗೆ 75 ವರ್ಷ ವಯಸ್ಸಾಗಿತ್ತು.
ಮದನ್ ಲಾಲ್ ಸೈನಿ
ಮದನ್ ಲಾಲ್ ಸೈನಿ
ನವದೆಹಲಿ: ಏಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಜಸ್ಥಾನ ಬಿಜೆಪಿ ಅಧ್ಯಕ್ಷ ಮದನ್ ಲಾಲ್ ಸೈನಿ ನಿಧನರಾಗಿದ್ದಾರೆ.  ರಾಜ್ಯಸಭಾ ಸದಸ್ಯರೂ ಆಗಿದ್ದ   ಮದನ್ ಲಾಲ್ ಸೈನಿಗೆ 75 ವರ್ಷ ವಯಸ್ಸಾಗಿತ್ತು. 
ಶ್ವಾಸಕೋಶದ ಸೋಂಕಿನಿಂದ ಶನಿವಾರ ಜೈಪುರದಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಆರೋಗ್ಯ ಪರಿಸ್ಥಿತಿ ಕ್ಷಿಣಿಸಿದ್ದರಿಂದ ದೆಹಲಿಗೆ ಸ್ಥಳಾಂತರಿಸಲಾಗಿತ್ತು. 
ಮದನ್ ಲಾಲ್ ಆರೋಗ್ಯ ತೀರಾ ಕ್ಷೀಣಿಸಿದ ನಂತರ ಐಸಿಯುಗೆ ಸ್ಥಳಾಂತರಿಸಲಾಯಿತು. ಆದರೆ, ಇಂದು ಸಂಜೆ 7.09ರಲ್ಲಿ ನಿಧನರಾಗಿದ್ದಾರೆ ಎಂದು ಏಮ್ಸ್ ಮೂಲಗಳು ತಿಳಿಸಿವೆ. 
ಸೈನಿ ಕಳೆದ ವರ್ಷ ರಾಜಸ್ಥಾನ ಬಿಜೆಪಿ ಅಧ್ಯಕ್ಷರಾಗಿ ನೇಮಕ ಮಾಡಲಾಗಿತ್ತು. ಮಾಜಿ ಶಾಸಕ ಹಾಗೂ ಆರ್ ಎಸ್ ಎಸ್ ಸ್ವಯಂ ಸೇವಕರಾಗಿದ್ದ ಅವರು ಬಿಜೆಪಿ ಕಿಸಾನ್ ಮೋರ್ಚಾ ಸೇರಿದಂತೆ ಹಲವು ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ.
ಸೈನಿ ನಿಧನದಿಂದ ಪಕ್ಷಕ್ಕೆ ನಷ್ಟ ಉಂಟಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಸಂತಾಪ ಸೂಚಕ ಸಂದೇಶದಲ್ಲಿ ತಿಳಿಸಿದ್ದಾರೆ.
ಸೈನಿ ಅವರನ್ನು ಜನ ಸೇವಕ ಎಂದು ಕರೆದಿರುವ ಅಮಿತ್ ಶಾ, ರಾಜಸ್ಥಾನದಲ್ಲಿ ಬಿಜೆಪಿ ಬಲಗೊಳ್ಳಲು ಪ್ರಮುಖ ಪಾತ್ರ ವಹಿಸಿದ್ದರು ಎಂದು ಸ್ಮರಿಸಿ ಸಂತಾಪ ಸೂಚಿಸಿದ್ದಾರೆ.
ಬಿಜೆಪಿ  ಕಾರ್ಯಾಧ್ಯಕ್ಷ ಜೆ. ಪಿ. ನಡ್ಡಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ , ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತಿತರರು ಸೈನಿ ನಿಧನಕ್ಕೆ  ಸಂತಾಪ ಸೂಚಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com