ಪಂಚಾಯತ್ ರಾಜ್ ಸಂಸ್ಥೆಗಳ ಸಬಲೀಕರಣಕ್ಕೆ ಕೇಂದ್ರದಿಂದ 7255.5 ಕೋಟಿ ರೂ. ಬಿಡುಗಡೆ

ರಾಷ್ಟ್ರೀಯ ಗ್ರಾಮ ಸ್ವರಾಜ್ ಅಭಿಯಾನದಡಿಯಲ್ಲಿ ದೇಶದಲ್ಲಿ ಪಂಚಾಯತ್ ರಾಜ್ ಸಂಸ್ಥೆಗಳ ಸಬಲೀಕರಣಕ್ಕೆ ಕೇಂದ್ರದಿಂದ 7255. 5 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ಪಂಚಾಯತ್ ರಾಜ್ ಸಚಿವ ನರೇಂದ್ರ ಸಿಂಗ್ ತೋಮರ್ ಲೋಕಸಭೆಯಲ್ಲಿಂದು ತಿಳಿಸಿದರು.
ನರೇಂದ್ರ ಸಿಂಗ್ ತೋಮರ್
ನರೇಂದ್ರ ಸಿಂಗ್ ತೋಮರ್
ನವದೆಹಲಿ:ರಾಷ್ಟ್ರೀಯ ಗ್ರಾಮ ಸ್ವರಾಜ್ ಅಭಿಯಾನದಡಿಯಲ್ಲಿ ದೇಶದಲ್ಲಿ  ಪಂಚಾಯತ್ ರಾಜ್ ಸಂಸ್ಥೆಗಳ ಸಬಲೀಕರಣಕ್ಕೆ ಕೇಂದ್ರದಿಂದ 7255. 5 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ಪಂಚಾಯತ್ ರಾಜ್ ಸಚಿವ ನರೇಂದ್ರ ಸಿಂಗ್ ತೋಮರ್ ಲೋಕಸಭೆಯಲ್ಲಿಂದು ತಿಳಿಸಿದರು.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಚಿವರು, ಪಂಚಾಯತ್ ರಾಜ್ ಸಂಸ್ಥೆಗಳ  ಸಬಲೀಕರಣದ ಮೂಲಕ ಸುಸ್ಥಿರ ಅಭಿವೃದ್ಧಿ ಗುರಿ ಸಾಧಿಸುವ ನಿಟ್ಟಿನಲ್ಲಿ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಹಣಕಾಸು ನೆರವನ್ನು ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
7255.50 ಕೋಟಿ ಅಂದಾಜು ವೆಚ್ಚದೊಂದಿಗೆ  2018-19 ರಿಂದ 2021-22 ರವರೆಗೂ ನಾಲ್ಕು ವರ್ಷಗಳ ಅವಧಿಗಾಗಿ ರಾಷ್ಟ್ರೀಯ ಗ್ರಾಮ ಸ್ವರಾಜ್ ಅಭಿಯಾನ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಲಿಖಿತ ಉತ್ತರದಲ್ಲಿ ಸಚಿವರು ತಿಳಿಸಿದ್ದಾರೆ.
ಪಂಚಾಯತ್ ರಾಜ್ ಸಂಸ್ಥೆಗಳ ಸಬಲೀಕರಣಕ್ಕಾಗಿ ಕಾರ್ಯಕ್ರಮ ಆಧಾರಿತ ಬೆಂಬಲವನ್ನು ಒದಗಿಸುತ್ತಿರುವ ಸಚಿವಾಲಯ, ಚುನಾಯಿತ ಪ್ರತಿನಿಧಿಗಳ ಸಾಮರ್ಥ್ಯ ವೃದ್ಧಿ ಹಾಗೂ  ಪಂಚಾಯತ್ ರಾಜ್ ಸಂಸ್ಥೆಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವಂತೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ
ರಾಷ್ಟ್ರೀಯ ಗ್ರಾಮ ಸ್ವರಾಜ್ ಯೋಜನೆಯಡಿ ಸಾಮರ್ಥ್ಯ ವೃದ್ಧಿ ಮತ್ತು ತರಬೇತಿ, ಮಾನವ ಸಂಪನ್ಮೂಲ ಮತ್ತು ತರಬೇತಿ, ಗ್ರಾಮಸಭೆ ಸಬಲೀಕರಣ, ದೂರ ಸಂಪರ್ಕ, ತಾಂತ್ರಿಕ ಬೆಂಬಲ , ಆರ್ಥಿಕ ಅಭಿವೃದ್ಧಿ ಹಾಗೂ ಆದ್ವಾಯ ದ್ವಿಗುಣ ಮತ್ತಿತರ ಚಟುವಟಿಕೆಗಳನ್ನು ಕೈಗೊಳ್ಳಲಾಗಿದೆ  ಎಂದು ಸಚಿವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com