ಈಡೇರದ ಸಾಲಮನ್ನಾ ಭರವಸೆ: ರಾಜಸ್ಥಾನ ಸಿಎಂ ಗೆಹ್ಲೋಟ್ ಹೆಸರು ಬರೆದಿಟ್ಟು ರೈತ ಆತ್ಮಹತ್ಯೆ

ಸಾಲ ಮನ್ನಾ ಆಗದ ಹಿನ್ನೆಲೆಯಲ್ಲಿ ರಾಜಸ್ಥಾನದ ಶ್ರೀಗಂಗಾನಗರ ಜಿಲ್ಲೆಯ ತಕ್ರಿ ಗ್ರಾಮದ 45 ವರ್ಷದ ರೈತರೊಬ್ಬರು ಕ್ರಿಮಿನಾಶಕ ಕುಡಿದು ಆತ್ಮಹತ್ಯೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಜೈಪುರ: ಸಾಲ ಮನ್ನಾ ಆಗದ ಹಿನ್ನೆಲೆಯಲ್ಲಿ ರಾಜಸ್ಥಾನದ ಶ್ರೀಗಂಗಾನಗರ ಜಿಲ್ಲೆಯ ತಕ್ರಿ ಗ್ರಾಮದ 45 ವರ್ಷದ ರೈತರೊಬ್ಬರು ಕ್ರಿಮಿನಾಶಕ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮಂಗಳವಾರ ಪೊಲೀಸರು ತಿಳಿಸಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡ ರೈತ ಸೋಹನ್ ಲಾಲ್ ಎಂದು ಗುರುತಿಸಲಾಗಿದ್ದು, ಆತ್ಮಹತ್ಯೆಗೆ ಮುನ್ನ ವೀಡಿಯೋ ಮಾಡಿಕೊಂಡು, ಎರಡು ಪುಟಗಳ ಪತ್ರವನ್ನೂ ಬರೆದಿಟ್ಟು ತಮ್ಮ ಸಾವಿಗೆ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಅವರೇ ಕಾರಣ ಎಂದು ಆರೋಪಿಸಿದ್ದಾರೆ.
ಚುನಾವಣೆಗೆ ಮುನ್ನ ಸಾಲ ಮನ್ನಾ ಮಾಡುವುದಾಗಿ ಭರವಸೆ ನೀಡಿ ಈಗ ಮೋಸ ಮಾಡಿದ್ದಾರೆ ಎಂದು ರೈತ ಸರ್ಕಾರವನ್ನು ದೂರಿದ್ದಾರೆ.
ರೈತ ಸೋಹಲ್ ತಮ್ಮ ಡೆತ್‌ನೋಟ್‌ನಲ್ಲಿ, ಗೆಹ್ಲೋಟ್ ಮತ್ತು ಪೈಲಟ್ ಹೆಸರನ್ನು ಉಲ್ಲೇಖಿಸಿದ್ದಾರೆ. ರೈತರ ಸಾಲ ಮನ್ನಾ ಭರವಸೆಯನ್ನು ರಾಜಸ್ಥಾನದ ಕಾಂಗ್ರೆಸ್ ಸರಕಾರ ಈಡೇರಿಸದ ಕಾರಣ ಆತ್ಮಹತ್ಯೆ ಮಾಡಿಕೊಳ್ಳದೆ ಬೇರೆ ದಾರಿಯೇ ಉಳಿದಿಲ್ಲ ಎಂದು ಹೇಳಿದ್ದಾರೆ.
ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಮುನ್ನ ರೈತರ ಸಾಲಮನ್ನಾ ಮಾಡುವ ಭರವಸೆ ನೀಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿತ್ತು. ಅದರಂತೆ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಅಶೋಕ್ ಗೆಹ್ಲೋಟ್ ಸರ್ಕಾರ, ಸಹಕಾರಿ ಬ್ಯಾಂಕುಗಳ ಸಾಲ ಮನ್ನಾದ ಪ್ರಕ್ರಿಯೆ ಆರಂಭಿಸಿತ್ತು. ಹಾಗಿದ್ದರೂ ಕೇಂದ್ರದ ಅಧೀನದ ರಾಷ್ಟ್ರೀಕೃತ ಬ್ಯಾಂಕುಗಳ ಸಾಲ ಮನ್ನಾ ಇನ್ನೂ ಸಾಧ್ಯವಾಗಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com