ಮತದಾನಕ್ಕೆ ಅಡ್ಡಿ: ಆಪ್ ಶಾಸಕನಿಗೆ 3 ತಿಂಗಳ ಜೈಲು ಶಿಕ್ಷೆ ವಿಧಿಸಿದ ದೆಹಲಿ ಕೋರ್ಟ್

ಮತದಾನ ಪ್ರಕ್ರಿಯೆಗೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಪ್ ಶಾಸಕ ಮನೋಜ್ ಕುಮಾರ್ ಅವರಿಗೆ ದೆಹಲಿ ಕೋರ್ಟ್ ಮಂಗಳವಾರ....
ಶಾಸಕ ಮನೋಜ್ ಕುಮಾರ್
ಶಾಸಕ ಮನೋಜ್ ಕುಮಾರ್
ನವದೆಹಲಿ: ಮತದಾನ ಪ್ರಕ್ರಿಯೆಗೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಪ್ ಶಾಸಕ ಮನೋಜ್ ಕುಮಾರ್ ಅವರಿಗೆ ದೆಹಲಿ ಕೋರ್ಟ್ ಮಂಗಳವಾರ ಮೂರು ತಿಂಗಳು ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
2013ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಪೂರ್ವ ದೆಹಲಿಯ ಕಲ್ಯಾಣ್ ಪುರಿ ಮತದಾನ ಕೇಂದ್ರದಲ್ಲಿ ಮತದಾನ ಪ್ರಕ್ರಿಯೆ ಹಾಗೂ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಮನೋಜ್ ವಿರುದ್ಧ ಚುನಾವಣಾ ಆಯೋಗ ಕೇಸ್ ದಾಖಲಿಸಿತ್ತು. 
ಪ್ರಕರಣದ ವಿಚಾರಣೆ ನಡೆಸಿದ ದೆಹಲಿ ಕೋರ್ಟ್ ನ ಹೆಚ್ಚುವರಿ ಮುಖ್ಯ ಮೆಟ್ರೋಪೊಲಿಟಿಯನ್ ಮ್ಯಾಜಿಸ್ಟ್ರೇಟ್ ಸಮರ್ ವಿಶಾಲ್ ಅವರು ಆರೋಪಿ ಶಾಸಕನಿಗೆ ಮೂರು ತಿಂಗಳು ಜೈಲು ಶಿಕ್ಷೆ ವಿಧಿಸಿದ್ದಾರೆ. ಅಲ್ಲದೆ ಹತ್ತು ಸಾವಿರ ರೂಪಾಯಿ ಬಾಂಡ್ ಮೇಲೆ ಮನೋಜ್ ಕುಮಾರ್ ಗೆ ಜಾಮೀನು ಸಹ ನೀಡಿದ್ದು, ಮನೋಜ್ ಕುಮಾರ್ ಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಬಹುದಾಗಿದೆ ಎಂದು ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com