ಛತ್ತೀಸ್ ಗಢ; ನಕ್ಸಲ್ ಎನ್ ಕೌಂಟರ್ ನಲ್ಲಿ ಇಬ್ಬರು ಸಿಆರ್ ಪಿಎಫ್ ಯೋಧರು ಹುತಾತ್ಮ

ನಕ್ಸಲೀಯರ ಜೊತೆ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಸಿಆರ್ ಪಿಎಫ್ ಯೋಧರು ಹುತಾತ್ಮರಾಗಿದ್ದು ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಛತ್ತೀಸ್ ಗಢ: ನಕ್ಸಲೀಯರ ಜೊತೆ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಸಿಆರ್ ಪಿಎಫ್ ಯೋಧರು ಹುತಾತ್ಮರಾಗಿದ್ದು ಮತ್ತೊಬ್ಬರು ಗಾಯಗೊಂಡಿರುವ ಘಟನೆ ಬಿಜಾಪುರ್ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ.
ಗುಂಡಿನ ಚಕಮಕಿ ವೇಳೆ ಹಾದಿಯಲ್ಲಿ ಹೋಗುತ್ತಿದ್ದ ಇಬ್ಬರು ಬಾಲಕಿಯರು ಸಿಕ್ಕಿಹಾಕಿಕೊಂಡಿದ್ದು ಅವರಲ್ಲಿ ಒಬ್ಬಾಕೆ ಮೃತಪಟ್ಟರೆ ಮತ್ತೊಬ್ಬ ಹುಡುಗಿ ಗಾಯಗೊಂಡಿದ್ದಾರೆ.
ಸಿಆರ್ ಪಿಎಫ್ ನ 199ನೇ ಬೆಟಾಲಿಯನ್ ಮತ್ತು ಸ್ಥಳೀಯ ಪೊಲೀಸರು ಬಿಜಾಪುರ್ ಜಿಲ್ಲೆಯ ಬೈರಮ್ ಗರ್ ಪೊಲೀಸ್ ಠಾಣೆಯ ಪ್ರದೇಶದ ಕೆಶ್ಕುತುಲ್ ಗ್ರಾಮದಲ್ಲಿ ಇಂದು ನಸುಕಿನ ಜಾವ ಶೋಧ ಕಾರ್ಯ ನಡೆಸುತ್ತಿದ್ದಾಗ ನಕ್ಸಲೀಯರು ಗುಂಡಿನ ಮಳೆ ಹರಿಸಲು ಆರಂಭಿಸಿದರು. ಅದಕ್ಕೆ ಪ್ರತಿಯಾಗಿ ಯೋಧರು ದಾಳಿ  ನಡೆಸಿದಾಗ ಗುಂಡಿನ ಚಕಮಕಿ ನಡೆಯಿತು ಎಂದು ಬಸ್ಟರ್ ವಲಯದ ಐಜಿ ವಿವೇಕಾನಂದ ಸಿನ್ಹಾ ತಿಳಿಸಿದ್ದಾರೆ. 
ಗುಂಡಿನ ದಾಳಿಯಲ್ಲಿ ಸಿಆರ್ ಪಿಎಫ್ ಸಿಬ್ಬಂದಿಗಳಾದ ಸಹಾಯಕ ಸಬ್ ಇನ್ಸ್ ಪೆಕ್ಟರ್ ಮತ್ತು ಹೆಡ್ ಕಾನ್ಸ್ಟೇಬಲ್ ಮೃತಪಟ್ಟಿದ್ದಾರೆ. ಮತ್ತೊಬ್ಬ ಸಹಾಯಕ ಸಬ್ ಇನ್ಸ್ಪೆಕ್ಟರ್ ಗಾಯಗೊಂಡಿದ್ದಾರೆ ಎಂದು ಸಿನ್ಹಾ ತಿಳಿಸಿದರು.
ದಾರಿಯಲ್ಲಿ ಗೂಡ್ಸ್ ಕ್ಯಾರಿಯರ್ ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಅಪ್ರಾಪ್ತ ಬಾಲಕಿಯರು ಗುಂಡಿನ ದಾಳಿಗೆ ಸಿಲುಕಿ ಗಾಯಗೊಂಡಿದ್ದಾರೆ. ಅವರಲ್ಲಿ ಒಬ್ಬಾಕೆ ಮೃತಪಟ್ಟರೆ ಮತ್ತೊಬ್ಬ ಹುಡುಗಿ ಗಾಯಗೊಂಡಿದ್ದಾಳೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com