ಛತ್ತೀಸ್ ಗಢ ಕಾಂಗ್ರೆಸ್ ಅಧ್ಯಕ್ಷರಾಗಿ ಮೋಹನ್ ಮಾರ್ಕಮ್ ನೇಮಕ

ಕಾಂಗ್ರೆಸ್ ಶಾಸಕ ಮೋಹನ್ ಮಾರ್ಕಮ್ ಅವರನ್ನು ಛತ್ತೀಸ್ ಗಢ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರನ್ನಾಗಿ ಶುಕ್ರವಾರ ನೇಮಕ ಮಾಡಲಾಗಿದೆ.
ಮೋಹನ್ ಮರ್ಕಮ್
ಮೋಹನ್ ಮರ್ಕಮ್
ನವದೆಹಲಿ: ಕಾಂಗ್ರೆಸ್ ಶಾಸಕ ಮೋಹನ್ ಮಾರ್ಕಮ್ ಅವರನ್ನು ಛತ್ತೀಸ್ ಗಢ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರನ್ನಾಗಿ ಶುಕ್ರವಾರ ನೇಮಕ ಮಾಡಲಾಗಿದೆ.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಛತ್ತೀಸ್'ಗಢದ ನೂತನ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮೋಹನ್ ಮಾರ್ಕಮ್ ಅವರನ್ನು ನೇಮಿಸಿ ಇಂದು ಹೊರಡಿಸಿದ್ದಾರೆ. ಈ ಕೂಡಲೇ ಮೋಹನ್ ಮರ್ಕಮ್ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಛತ್ತೀಸ್ ಗಢ ಮುಖ್ಯಮಂತ್ರಿ ಭೂಪೇಶ್ ಬಘೆಲ್ ಅವರು ಛತ್ತೀಸ್'ಗಡ್ ಕಾಂಗ್ರೆಸ್ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇವರ ನೇತೃತ್ವದಲ್ಲಿ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಪಡೆದ ಕಾಂಗ್ರೆಸ್, ಲೋಕಸಭೆ ಚುನಾವಣೆಯಲ್ಲಿ ಕೇವಲ ಎರಡು ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ತೀವ್ರ ಮುಖಭಂಗ ಅನುಭವಿಸಿತ್ತು.
ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಪಕ್ಷವನ್ನು ಸಂಘಟಿಸುವ ನಿಟ್ಟಿನಲ್ಲಿ, ಮೋಹನ್ ಮಾರ್ಕಮ್ ಅವರನ್ನು ರಾಜ್ಯ ಕಾಂಗ್ರೆಸ್ ಘಟಕದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ ಎನ್ನಾಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com