ಕೇಂದ್ರ ಸರ್ಕಾರದ ಯೋಜನೆಗಳ ಪ್ರಚಾರಕ್ಕಾಗಿ 3,800 ಕೋಟಿ ರೂ. ವೆಚ್ಚ

ಕಳೆದ ಮೂರು ವರ್ಷಗಳಲ್ಲಿ ಸರ್ಕಾರದ ಯೋಜನೆಗಳ ಪ್ರಚಾರಕ್ಕಾಗಿಯೇ ಕೇಂದ್ರ ಸರ್ಕಾರ 3 ಸಾವಿರದ 800 ಕೋಟಿ ರೂಪಾಯಿ ವೆಚ್ಚ ಮಾಡಿದೆ. ಕೇಂದ್ರ ವಾರ್ತಾ ಸಚಿವ ಪ್ರಕಾಶ್ ಜಾವಡೇಕರ್ ಲೋಕಸಭೆಗೆ ಈ ವಿಷಯ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ನವದೆಹಲಿ:  ಕಳೆದ ಮೂರು ವರ್ಷಗಳಲ್ಲಿ ಸರ್ಕಾರದ ಯೋಜನೆಗಳ ಪ್ರಚಾರಕ್ಕಾಗಿಯೇ ಕೇಂದ್ರ ಸರ್ಕಾರ 3 ಸಾವಿರದ 800 ಕೋಟಿ ರೂಪಾಯಿ ವೆಚ್ಚ ಮಾಡಿದೆ.  ಕೇಂದ್ರ ವಾರ್ತಾ ಸಚಿವ ಪ್ರಕಾಶ್ ಜಾವಡೇಕರ್  ಲೋಕಸಭೆಗೆ ಈ ವಿಷಯ ತಿಳಿಸಿದ್ದಾರೆ.
ಸರ್ಕಾರದ ಕಾರ್ಯಕ್ರಮಗಳು ಹಾಗೂ ನೀತಿಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಸಲುವಾಗಿ ವಿದ್ಯುನ್ಮಾನ, ಮುದ್ರಣ ಹಾಗೂ ಹೊರಂಗಣ ಮಾಧ್ಯಮವನ್ನು ಬಳಸಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.
ಪ್ರಚಾರಕ್ಕಾಗಿ 2016-17ರಲ್ಲಿ 1,280.07 ಕೋಟಿ, 2017-18ರಲ್ಲಿ 1328.06 ಕೋಟಿ ಹಾಗೂ 2018-19ರಲ್ಲಿ 1195.94 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ ಎಂದು ಪ್ರಕಾಶ್ ಜಾವಡೇಕರ್  ವೆಚ್ಚದ ಮಾಹಿತಿ ನೀಡಿದ್ದಾರೆ.
2016-17ರಲ್ಲಿ ಮುದ್ರಣ ಮಾಧ್ಯಮಕ್ಕೆ 468.53 ಕೋಟಿ, ವಿದ್ಯುನ್ಮಾನ ಮಾಧ್ಯಮಕ್ಕೆ 609.14 ಕೋಟಿ, ಹೊರಂಗಣ ಪ್ರಚಾರಕ್ಕೆ 186.59 ಕೋಟಿ ರೂ. ವೆಚ್ಚ ಮಾಡಲಾಗಿದೆ. 2017-18ರಲ್ಲಿ ಮುದ್ರಣ ಮಾಧ್ಯಮಕ್ಕೆ 636.09 ಕೋಟಿ, ವಿದ್ಯುನ್ಮಾನ ಮಾಧ್ಯಮಕ್ಕೆ 468.93 ಕೋಟಿ, ಹೊರಂಗಣ ಪ್ರಚಾರಕ್ಕಾಗಿ 208.55 ಕೋಟಿ ರೂ. ಖರ್ಚು ಮಾಡಲಾಗಿದೆ. 2018-19ರಲ್ಲಿ ಮುದ್ರಣ ಮಾಧ್ಯಮಕ್ಕೆ 429.55 ಕೋಟಿ, ವಿದ್ಯುನ್ಮಾನ ಮಾಧ್ಯಮಕ್ಕೆ 514. 29 ಕೋಟಿ, ಹೊರಂಗಣ ಪ್ರಚಾರಕ್ಕಾಗಿ 16.77 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಜಾವಡೇಕರ್ ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com