ಜಮ್ಮು-ಕಾಶ್ಮೀರದಲ್ಲಿ 6 ತಿಂಗಳು ರಾಷ್ಟ್ರಪತಿ ಆಡಳಿತ ವಿಸ್ತರಣೆ ಕೋರಿ ಗೃಹ ಸಚಿವ ಅಮಿತ್ ಶಾ ನಿರ್ಣಯ ಮಂಡನೆ

ಜುಲೈ 3ರಿಂದ ಮತ್ತೆ ಆರು ತಿಂಗಳವರೆಗೆ ಜಮ್ಮು-ಕಾಶ್ಮೀರದಲ್ಲಿ ರಾಷ್ಟ್ರಪತಿ ಆಡಳಿತವನ್ನು ವಿಸ್ತರಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ...
ಅಮಿತ್ ಶಾ
ಅಮಿತ್ ಶಾ
ನವದೆಹಲಿ: ಜುಲೈ 3ರಿಂದ ಮತ್ತೆ ಆರು ತಿಂಗಳವರೆಗೆ ಜಮ್ಮು-ಕಾಶ್ಮೀರದಲ್ಲಿ ರಾಷ್ಟ್ರಪತಿ ಆಡಳಿತವನ್ನು ವಿಸ್ತರಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಲೋಕಸಭೆಯಲ್ಲಿ ಶಾಸನಬದ್ಧ ನಿರ್ಣಯ ಮಂಡಿಸಿದ್ದಾರೆ.
ಲೋಕಸಭೆಯಲ್ಲಿ ಇಂದು ನಿರ್ಣಯ ಮಂಡಿಸಿದ ಅಮಿತ್ ಶಾ ಅಮರನಾಥ ಯಾತ್ರೆ ಮುಂದಿನ ತಿಂಗಳು ಇರುವುದರಿಂದ ರಾಜ್ಯದಲ್ಲಿ ಈಗ ಚುನಾವಣೆ ನಡೆಯಲು ಸಾಧ್ಯವಿಲ್ಲ. ಕೇಂದ್ರ ಚುನಾವಣಾ ಆಯೋಗ ಈ ವರ್ಷದ ಕೊನೆಗೆ ಜಮ್ಮು-ಕಾಶ್ಮೀರದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿದೆ ಎಂದು ಪ್ರಕಟಿಸಿದರು.
ಕಳೆದ ಹಲವು ದಶಕಗಳಿಂದ ಈ ತಿಂಗಳುಗಳಲ್ಲಿ ಜಮ್ಮು-ಕಾಶ್ಮೀರದಲ್ಲಿ ಚುನಾವಣೆ ನಡೆದಿರಲಿಲ್ಲ ಎಂದು ಅಮಿತ್ ಶಾ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com