200 ಪಾಯಿಂಟ್ ರೋಸ್ಟರ್ ವ್ಯವಸ್ಥೆ ಜಾರಿಗೆ ಸುಗ್ರೀವಾಜ್ಞೆಗೆ ಕೇಂದ್ರ ಸಂಪುಟ ಅನುಮೋದನೆ

ವಿಶ್ವವಿದ್ಯಾಲಯಗಳು ಹಾಗೂ ಕಾಲೇಜುಗಳಲ್ಲಿ ಬೋದಕರ ನೇಮಕಾತಿಯಲ್ಲಿ ಮೀಸಲಾತಿಗಾಗಿ 200 ಅಂಶಗಳ ರೋಸ್ಟರ್ ಪದ್ದತಿಯನ್ನು ಜಾರಿಗೊಳಿಸುವ ಸುಗ್ರೀವಾಜ್ಞೆ ಹೊರಡಿಸಲು ಕೇಂದ್ರ ಸಚಿವ ಸಂಪುಟ ಗುರುವಾರ ನಿರ್ಧರಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ವಿಶ್ವವಿದ್ಯಾಲಯಗಳು ಹಾಗೂ ಕಾಲೇಜುಗಳಲ್ಲಿ ಬೋದಕರ ನೇಮಕಾತಿಯಲ್ಲಿ  ಮೀಸಲಾತಿಗಾಗಿ 200 ಅಂಶಗಳ ರೋಸ್ಟರ್  ಪದ್ದತಿಯನ್ನು  ಜಾರಿಗೊಳಿಸುವ ಸುಗ್ರೀವಾಜ್ಞೆ ಹೊರಡಿಸಲು ಕೇಂದ್ರ ಸಚಿವ ಸಂಪುಟ ಗುರುವಾರ ನಿರ್ಧರಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ  ನಡೆದ ಸಚಿವ ಸಂಪುಟ ಸಭೆ ಸುಗ್ರೀವಾಜ್ಞೆಗೆ ಅನುಮೋದನೆ ನೀಡಿದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ತಿಳಿಸಿದ್ದಾರೆ.
 

ಉದ್ದೇಶಿತ ಪ್ರಸ್ತಾವನೆ  ವಿಶ್ವವಿದ್ಯಾಲಯಗಳಲ್ಲಿ ಬೋದಕರ ಹುದ್ದೆಗಳ ನೇಮಕಾತಿಯಲ್ಲಿ  ದಲಿತರು, ಬುಡಕಟ್ಟು ಸಮುದಾಯ ಹಾಗೂ ಹಿಂದುಳಿದ ವರ್ಗಗಳಿಗೆ ಮೀಸಲಾತಿಯನ್ನು  ಖಾತರಿ ಪಡಿಸುತ್ತದೆ.
ಕೇಂದ್ರ ಸರ್ಕಾರ ಸಾಮಾಜಿಕ ನ್ಯಾಯದ ಪರವಾಗಿದ್ದು, 200 ಪಾಯಿಂಟ್ ರೋಸ್ಟರ್ ಪದ್ಧತಿ ಜಾರಿಗೊಳಿಸಲಿದೆ ಎಂದು `ಮೊನ್ನೆಯಷ್ಟೇ ಮಾನವ ಸಂಪನ್ಮೂಲಗಳ ಸಚಿವ ಪ್ರಕಾಶ್ ಜಾವಡೇಕರ್ ಭರವಸೆ ನೀಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com