ಪುಲ್ವಾಮಾ ದಾಳಿ: ಇಮ್ರಾನ್ ಖಾನ್, ಮೋದಿ ನಡುವಿನ ಮ್ಯಾಚ್ ಫಿಕ್ಸಿಂಗ್ - ಬಿಕೆ ಹರಿಪ್ರಸಾದ್

ಫೆಬ್ರವರಿ 14 ರಂದು ನಡೆದ ಪುಲ್ವಾಮಾ ದಾಳಿ ಮ್ಯಾಚ್ ಫಿಕ್ಸಿಂಗ್ ಎಂದು ಹಿರಿಯ ಕಾಂಗ್ರೆಸ್ ಮುಖಂಡ, ರಾಜ್ಯಸಭಾ ಸದಸ್ಯ ಬಿಕೆ ಹರಿಪ್ರಸಾದ್ ಹೇಳಿದ್ದಾರೆ.

Published: 07th March 2019 12:00 PM  |   Last Updated: 07th March 2019 06:42 AM   |  A+A-


B.K.Hariprasad

ಬಿ. ಕೆ. ಹರಿಪ್ರಸಾದ್

Posted By : ABN ABN
Source : Online Desk
ಹೊಸದೆಹಲಿ: ಫೆಬ್ರವರಿ 14 ರಂದು ನಡೆದ ಪುಲ್ವಾಮಾ ದಾಳಿ ಮ್ಯಾಚ್ ಫಿಕ್ಸಿಂಗ್ ಎಂದು ಹಿರಿಯ ಕಾಂಗ್ರೆಸ್ ಮುಖಂಡ, ರಾಜ್ಯಸಭಾ ಸದಸ್ಯ ಬಿಕೆ ಹರಿಪ್ರಸಾದ್ ಹೇಳಿದ್ದಾರೆ.

ಪುಲ್ವಾಮಾ ದಾಳಿ ಹಾಗೂ ಆ ನಂತರದ ಘಟನಾವಳಿಗಳನ್ನು ನೋಡಿದರೆ ಇದು ಮೋದಿ ಅವರು ಪಾಕಿಸ್ತಾನ ಜೊತೆ ಸೇರಿ ನಡೆಸಿದ ಮ್ಯಾಚ್ ಫಿಕ್ಸಿಂಗ್ ಮಾದರಿಯಲ್ಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಹರಿಪ್ರಸಾದ್, ಪ್ರಧಾನಿ ನರೇಂದ್ರ ಮೋದಿ ಮತ್ತು ಪಾಕಿಸ್ತಾನ ಪ್ರಧಾನ ಮಂತ್ರಿ ಇಮ್ರಾನ್ ಖಾನ್ ಕೈ  ಜೋಡಿಸಿ ಇಂತ ಉಗ್ರ ದಾಳಿ ನಡೆಸಿದ್ದಾರೆ ಎಂದು ಆರೋಪಿಸಿದರು.

ಇಮ್ರಾನ್ ಖಾನ್ ಹಾಗೂ ಪ್ರಧಾನಿ ಮೋದಿ ಅವರ ಗಮನಕ್ಕೆ ಬಾರದೆ  ಪುಲ್ವಾಮಾ ದಾಳಿ ನಡೆದಿರಲು ಸಾಧ್ಯವಿಲ್ಲ, ಈ ಉಭಯ ನಾಯಕರ ನಡುವೆ ಒಂದು ವೇಳೆ ಮ್ಯಾಚ್ ಫಿಕ್ಸಿಂಗ್ ನಡೆದಿದ್ದರೆ ಅದರ ಬಗ್ಗೆ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್  ಸ್ಪಷ್ಟನೆ ನೀಡಬೇಕೆಂದು ಅವರು ಒತ್ತಾಯಿಸಿದರು.

ಕಾಂಗ್ರೆಸ್  ರಾಜಕೀಯ ಲಾಭಕ್ಕಾಗಿ ಭದ್ರತಾ ಪಡೆಗಳ ಬಗ್ಗೆ ಅಪಮಾನ ಮಾಡುತ್ತಿದೆ ಎಂದು ರವಿಶಂಕರ್ ಪ್ರಸಾದ್ ಮಂಗಳವಾರ ಹೇಳಿಕೆ ನೀಡಿದ್ದರು. ಪುಲ್ವಾಮಾ ನಂತರ ನಡೆದ ಬೆಳವಣಿಗೆಗಳನ್ನು ಗಮನಿಸಿದ್ದರೆ  ಮೋದಿ, ಪಾಕಿಸ್ತಾನದ ಇಮ್ರಾನ್ ಖಾನ್ ಜೊತೆಗೆ ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿರುವಂತೆ ತೋರುತ್ತಿದೆ ಎಂದಿದ್ದಾರೆ.

ಪುಲ್ವಾಮಾದಲ್ಲಿ  ಅರೆಸೇನಾ ಪಡೆ ಪ್ರಯಾಣಿಸುತ್ತಿದ್ದ ಬಸ್ಸಿಗೆ ಜೈಷ್- ಇ- ಮೊಹಮ್ಮದ್ ಸಂಘಟನೆಯ ಆತ್ಮಾಹುತಿ ಬಾಂಬರ್ ಸ್ಪೋಟಕ ತುಂಬಿದ್ದ ಕಾರನ್ನು ಗುದ್ದಿಸಿದ್ದರಿಂದ 40 ಮಂದಿ ಸಿಆರ್ ಪಿಎಫ್ ಯೋಧರು ಹುತಾತ್ಮರಾಗಿದ್ದರು.ನಂತರ ಭಾರತೀಯ ವಾಯುಪಡೆ ಪಾಕಿಸ್ತಾನದ ಬಾಲಕೋಟ್ ನಲ್ಲಿ ಉಗ್ರರ ತರಬೇತಿ ಕೇಂದ್ರಗಳ ಮೇಲೆ ಬಾಂಬ್ ದಾಳಿ ನಡೆಸಿ ನಾಶಗೊಳಿಸಿತ್ತು.
Stay up to date on all the latest ರಾಷ್ಟ್ರೀಯ news with The Kannadaprabha App. Download now
facebook twitter whatsapp