ಪುಲ್ವಾಮ ದಾಳಿಗಿಂತಲೂ ದೊಡ್ಡ ವಿಧ್ವಂಸಕ ಕೃತ್ಯವೆಸಗಲು 'ಜೈಶ್ ಸಂಚು'

ಭಾರತೀಯ ವಾಯುಸೇನೆಯ ಏರ್ ಸ್ಟ್ರೈಕ್ ಗೆ ಪ್ರತಿಯಾಗಿ ಪಾಕಿಸ್ತಾನ ಮೂಲ ಜೈಶ್ ಇ ಮೊಹಮದ್ ಉಗ್ರ ಸಂಘಟನೆ ಪುಲ್ವಾಮ ದಾಳಿಗಿಂತಲೂ ದೊಡ್ಡದಾದ ಬೃಹತ್ ಉಗ್ರ ದಾಳಿಗೆ ಸಂಚು ರೂಪಿಸುತ್ತಿದೆ ಎಂದು ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.

Published: 08th March 2019 12:00 PM  |   Last Updated: 08th March 2019 12:59 PM   |  A+A-


Jaish-e-Mohammed planning another Pulwama-style convoy attack, warn Indian intelligence agencies

ಸಂಗ್ರಹ ಚಿತ್ರ

Posted By : SVN SVN
Source : Online Desk
ನವದೆಹಲಿ: ಭಾರತೀಯ ವಾಯುಸೇನೆಯ ಏರ್ ಸ್ಟ್ರೈಕ್ ಗೆ ಪ್ರತಿಯಾಗಿ ಪಾಕಿಸ್ತಾನ ಮೂಲ ಜೈಶ್ ಇ ಮೊಹಮದ್ ಉಗ್ರ ಸಂಘಟನೆ ಪುಲ್ವಾಮ ದಾಳಿಗಿಂತಲೂ ದೊಡ್ಡದಾದ ಬೃಹತ್ ಉಗ್ರ ದಾಳಿಗೆ ಸಂಚು ರೂಪಿಸುತ್ತಿದೆ ಎಂದು ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.

ಪುಲ್ವಾಮ ಉಗ್ರ ದಾಳಿ ಬೆನ್ನಲ್ಲೇ ಭಾರತೀಯ ವಾಯುಸೇನೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿದ್ದ ಉಗ್ರ ನೆಲೆಗಳನ್ನು ಧ್ವಂಸ ಮಾಡಿದ ಬೆನ್ನಲ್ಲೇ ಭಾರತದ ಮೇಲೆ ಮತ್ತೊಂದು ಬೃಹತ್ ದಾಳಿಗೆ ಜೈಶ್ ಇ ಮೊಹಮದ್ ಉಗ್ರ ಸಂಘಟನೆ ಸಂಚು ರೂಪಿಸುತ್ತಿದೆ ಎಂದು ಕೇಂದ್ರ ಗುಪ್ತಚರ ಇಲಾಖೆ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ. 

ಪುಲ್ವಾಮ ಮಾದರಿಯ ಮತ್ತೊಂದು ಆತ್ಮಾಹುತಿ ದಾಳಿ ನಡೆಸಲು ಪಾಕಿಸ್ತಾನ ಬೆಂಬಲಿತ ಜೈಶ್-ಇ-ಮಹಮ್ಮದ್ ಭಯೋತ್ಪಾದಕಾ ಸಂಘಟನೆ ಸಿದ್ಧತೆ ನಡೆಸಿದ್ದು, ಈ ಬಾರಿ ಸರಣಿ ಆತ್ಮಹತ್ಯಾ ದಾಳಿಗಳನ್ನು ಯೋಜಿಸುವ ಕುರಿತು ಜೈಶ್ ಉಗ್ರ ಸಂಘಟನೆ ಸಂಚು ರೂಪಿಸುತ್ತಿದೆ ಎನ್ನಲಾಗಿದೆ. ಬಾಲಕೋಟ್‍ನ ಭಯೋತ್ಪಾದಕಾ ಶಿಬಿರಗಳ ಮೇಲೆ ಭಾರತೀಯ ವಾಯುಪಡೆ ನಡೆಸಿದ ವಾಯುದಾಳಿಗೆ ಪ್ರತೀಕಾರವಾಗಿ ಇನ್ನೊಂದು ಪುಲ್ವಾಮ ಮಾದರಿಯ ದಾಳಿಯನ್ನು ಮೂರು-ನಾಲ್ಕು ದಿನಗಳಲ್ಲಿ ಜೈಶ್ ಸಂಘಟನೆ ನಡೆಸಲಿದೆ ಎಂಬ ಮಾಹಿತಿ ಹೊರಬಿದ್ದಿದೆ.

ಕಣಿವೆ ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ
ಗುಪ್ತಚರ ಮಾಹಿತಿಗಳನ್ನು ಆಧರಿಸಿ ಇದೀಗ ಕಣಿವೆ ರಾಜ್ಯದಲ್ಲಿ ಗರಿಷ್ಠ ಮಟ್ಟದ ಭದ್ರತಾ ವ್ಯವಸ್ಥೆಯನ್ನು ಮಾಡಲಾಗುತ್ತಿದ್ದು. ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಸೇನಾ ಸಿಬ್ಬಂದಿಗಳನ್ನು ನಿಯೋಜಿಸಲಾಗುತ್ತಿದೆ.
Stay up to date on all the latest ರಾಷ್ಟ್ರೀಯ news with The Kannadaprabha App. Download now
Poll
Coronavirus Lockdown

ಕರ್ಫ್ಯೂ, ಭಾನುವಾರದ ಲಾಕ್ ಡೌನ್ ನಿಂದ ರಾಜ್ಯದಲ್ಲಿ ಕೊರೋನಾ ಪ್ರಮಾಣ ತಗ್ಗಲಿದೆಯೇ?


Result
ಹೌದು
ಇಲ್ಲ
ಗೊತ್ತಿಲ್ಲ
facebook twitter whatsapp