ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳಾ ಮೀಸಲಾತಿ ಮಸೂದೆ ಅನುಮೋದನೆ- ರಾಹುಲ್

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಗೆದ್ದು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ಅನುಮೋದನೆಗೊಳ್ಳಲಿದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ.
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ಒಡಿಶಾ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಗೆದ್ದು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ಅನುಮೋದನೆಗೊಳ್ಳಲಿದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ.

ಕೊರಾಪಟ್ ಜಿಲ್ಲೆಯಲ್ಲಿ ಆಯೋಜಿಸಲಾಗಿದ್ದ ಮಹಿಳೆಯರ ಜೊತೆಗಿನ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ರಾಹುಲ್ ಗಾಂಧಿ, ಮಹಿಳೆಯರ ಬಲವರ್ಧನೆ ಹಿನ್ನೆಲೆಯಲ್ಲಿ ಸಂಸತ್ತು ಹಾಗೂ ರಾಜ್ಯ ವಿಧಾನಸಭೆಗಳಲ್ಲಿ ತುರ್ತಾಗಿ ಮಹಿಳೆಯರಿಗೆ ಮೀಸಲಾತಿ ಒದಗಿಸಬೇಕಾದ ಅಗತ್ಯವಿದೆ. ಇದನ್ನು ಖಾತ್ರಿಗೊಳಿಸುವ ನಿಟ್ಟಿನಲ್ಲಿ ಕಾಂಗ್ರೆಸ್  ಕೆಲಸ ಮಾಡಲಿದೆ ಎಂದು ಹೇಳಿದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರ ವಿರುದ್ಧದ ದೌರ್ಜನ್ಯ ತಡೆಗಟ್ಟುವ ನಿಟ್ಟಿನಲ್ಲಿ ನೀತಿ ರೂಪಿಸಲಾಗುವುದು,ಅವರಿಗೆ ಕ್ಷಿಪ್ರಗತಿಯಲ್ಲಿ ನ್ಯಾಯ ದೊರೆಕಿಸಲಾಗುವುದು, ಒಡಿಶಾದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ಎಲ್ಲಾ ಮಹಿಳೆಯರಿಗೂ ಇಂಜಿನಿಯರಿಂಗ್, ವೈದ್ಯಕೀಯ ಮತ್ತಿತರ ಯಾವುದೇ ಕ್ಷೇತ್ರದಲ್ಲಾದರೂ ಉಚಿತ ಶಿಕ್ಷಣ ಪೂರೈಸಲಾಗುವುದು ಎಂದು ಹೇಳಿದರು.

ಬುಡಕಟ್ಟ ದಲಿತ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿರುವ ಮಹಿಳೆಯರ ಸಬಲೀಕಣಕ್ಕಾಗಿ ಉಚಿತ ಶಿಕ್ಷಣ ಪೂರೈಸಲಾಗುವುದು ಎಂದು ರಾಹುಲ್ ಗಾಂಧಿ ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com