ಸಂಧಾನದಿಂದ ಅಯೋಧ್ಯೆ ವಿವಾದ ಇತ್ಯರ್ಥವಾಗಲ್ಲ, ಸುಗ್ರೀವಾಜ್ಞೆ ಹೊರಡಿಸಬೇಕು: ಶಿವಸೇನೆ

ಅಯೋಧ್ಯೆ ವಿವಾದ ಭಾವನಾತ್ಮಕವಾಗಿದ್ದು, ಅದು ಸಂಧಾನದ ಮೂಲಕ ಇತ್ಯರ್ಥಪಡಿಸಲು ಸಾಧ್ಯವಿಲ್ಲ ಎಂದು ಬಿಜೆಪಿ ಮಿತ್ರ ಪಕ್ಷ ಶಿವಸೇನೆ...
ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ
ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ
ಮುಂಬೈ: ಅಯೋಧ್ಯೆ ವಿವಾದ ಭಾವನಾತ್ಮಕವಾಗಿದ್ದು, ಅದು ಸಂಧಾನದ ಮೂಲಕ ಇತ್ಯರ್ಥಪಡಿಸಲು ಸಾಧ್ಯವಿಲ್ಲ ಎಂದು ಬಿಜೆಪಿ ಮಿತ್ರ ಪಕ್ಷ ಶಿವಸೇನೆ ಶನಿವಾರ ಹೇಳಿದೆ. ಅಲ್ಲದೆ ಕೇಂದ್ರ ಸರ್ಕಾರ ಈ ಸಂಬಂಧ ಸುಗ್ರೀವಾಜ್ಞೆ ಹೊರಡಿಸಿ, ರಾಮ ಮಂದಿರ ನಿರ್ಮಾಣ ಕಾರ್ಯ ಆರಂಭಿಸಬೇಕು ಎಂದು ಒತ್ತಾಯಿಸಿದೆ.
ದೇಶದ ರಾಜಕಾರಣಿಗಳಿಗೆ, ಆಡಳಿತಗಾರರಿಗೆ ಹಾಗೂ ಸುಪ್ರೀಂ ಕೋರ್ಟ್ ನಿಂದ ಇದುವರೆಗೂ ವಿವಾದ ಇತ್ಯಾರ್ಥವಾಗಿಲ್ಲ. ಇನ್ನು ಈ ಮೂವರು ಸಂಧಾನಕಾರರಿಂದ ಇತ್ಯರ್ಥಪಡಿಸಲು ಸಾಧ್ಯವೆ? ಎಂದು ಶಿವಸೇನೆ ಪ್ರಶ್ನಿಸಿದೆ.
ಸಂಧಾನದ ಮೂಲಕ ವಿವಾದ ಇತ್ಯರ್ಥಪಡಿಸುವುದಾದರೆ ಕಳೆದ 25 ವರ್ಷಗಳಿಂದ ಏಕೆ ಸಮಸ್ಯೆಯಾಗಿಯೇ ಉಳಿದಿದೆ? ಇದಕ್ಕಾಗಿ ನೂರಾರು ಜನ ಪ್ರಾಣ ಕಳೆದುಕೊಳ್ಳಬೇಕಿತ್ತೆ? ಎಂದು ಸಾಮ್ನಾ ಪ್ರಶ್ನಿಸಿದೆ.
ನಿನ್ನೆಯಷ್ಟೇ ಸುಪ್ರೀಂ ಕೋರ್ಟ್, ಧರ್ಮ ಮತ್ತು ರಾಜಕೀಯದೊಂದಿಗೆ ತಳುಕು ಹಾಕಿಕೊಂಡಿರುವ ಅಯೋಧ್ಯೆಯ ರಾಮಜನ್ಮಭೂಮಿ-ಬಾಬರಿ ಮಸೀದಿ ಜಾಗದ ಒಡೆತನದ ವಿವಾದ ಇತ್ಯರ್ಥಕ್ಕೆ ನಿವೃತ್ತ ನ್ಯಾಯಮೂರ್ತಿ ಎಫ್‌.ಎಂ. ಇಬ್ರಾಹಿಂ ಖಲಿಫುಲ್ಲಾ, ಆರ್ಟ್‌ ಆಫ್‌ ಲಿವಿಂಗ್‌ ಫೌಂಡೇಷನ್‌ ಸ್ಥಾಪಕ ಶ್ರೀ ಶ್ರೀ ರವಿಶಂಕರ್‌ ಗುರೂಜಿ ಮತ್ತು ಹಿರಿಯ ವಕೀಲ ಶ್ರೀರಾಮ್‌ ಪಂಚು ಅವರನ್ನೊಳಗೊಂಡ ತ್ರಿ ಸದಸ್ಯ ಸಂಧಾನ ಸಮಿತಿ ರಚಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com