2019ರ ಲೋಕಸಭೆ ಚುನಾವಣೆ: ವಾರಣಾಸಿಯಿಂದ ನರೇಂದ್ರ ಮೋದಿ ಸ್ಪರ್ಧೆ?

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪ್ರದಾನಿ ನರೇಂದ್ರ ಮೋದಿ ಉತ್ತರ ಪ್ರದೇಶದ ವಾರಣಾಸಿಯಿಂದ ಸ್ಪರ್ಧಿಸಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ....
ನರೇಂದ್ರ ಮೋದಿ
ನರೇಂದ್ರ ಮೋದಿ
ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪ್ರದಾನಿ ನರೇಂದ್ರ ಮೋದಿ ಉತ್ತರ ಪ್ರದೇಶದ ವಾರಣಾಸಿಯಿಂದ ಸ್ಪರ್ಧಿಸಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಶುಕ್ರವಾರ ನಡೆದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ನರೇಂದ್ರ ಮೋದಿ, ವಾರಣಾಸಿಯಿಂದ ಸ್ಪರ್ಧೆ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ಆದರೆ ವಾರಣಾಸಿಯಿಂದ ಸ್ಪರ್ಧೆ ಬಗ್ಗೆ ಇನ್ನೂ ಎಲ್ಲೂ ಅಧಿಕೃತವಾಗಿ ಪ್ರಕಟಿಸಿಲ್ಲ,
ಪ್ರಧಾನಿ ನರೇಂದ್ರ ಮೋದಿ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಬಿಜೆಪಿ ನಾಯಕರೊಬ್ಬರು ವಾರಣಾಸಿಯಿಂದ ಸ್ಪರ್ಧಿಸುವ ಸಂಬಂಧ ಈಗಾಗಲೇ ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ  ಇನ್ನೂ ಎರಡನೇ ಕ್ಷೇತ್ರ ಯಾವುದೆಂದು ಇನ್ನೂ ನಿರ್ಧಾರವಾಗಿಲ್ಲ..
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ, ಬಿಜೆಪಿ ಸಂಸದೀಯ ಮಂಡಳಿ ಸಭೆ ನಡೆಯಿತು, ಸಭೆಯಲ್ಲಿ ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಹಣಕಾಸು ಸಚಿವ ಅರುಣ್ ಜೈಟ್ಲಿ, ಸುಶ್ಮಾ ಸ್ವರಾಜ್ ಮುಂತಾದವರು ಭಾಗವಹಿಸಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com