ಎಕೆ-203 ರೈಫಲ್ ಗಳಿಂದ ಕಾರ್ಯಾಚರಣೆಗಳಲ್ಲಿ ಸೈನಿಕರ ಸಾಮರ್ಥ್ಯ ಹೆಚ್ಚಳ- ಸೀತಾರಾಮನ್

ಸ್ವದೇಶಿ ನಿರ್ಮಿತ ಎಕೆ-203 ರೈಫಲ್ ಗಳಿಂದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಸೈನಿಕರ ಸಾಮರ್ಥ್ಯ ಹೆಚ್ಚಳವಾಗಲಿದೆ ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ನಿರ್ಮಲಾ ಸೀತಾರಾಮನ್
ನಿರ್ಮಲಾ ಸೀತಾರಾಮನ್

ನವದೆಹಲಿ: ಸ್ವದೇಶಿ ನಿರ್ಮಿತ ಎಕೆ-203 ರೈಫಲ್ ಗಳಿಂದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಸೈನಿಕರ ಸಾಮರ್ಥ್ಯ ಹೆಚ್ಚಳವಾಗಲಿದೆ ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಧೀರ್ಘ ಕಾಲದಿಂದ INSAS ರೈಫಲ್ ಗಳನ್ನು ಬಳಸುತ್ತಿದ್ದರಿಂದ ನಮ್ಮ ಸೈನಿಕರು ಗನ್ ಜಾಮಿಂಗ್ ಮತ್ತಿತರ ಸಮಸ್ಯೆಗಳನ್ನು ಎದುರಿಸುತ್ತಿದ್ದರು. ಈ ರೈಫಲ್ ಗಳಿಗೆ ಹೋಲಿಸಿದರೆ ಎಕೆ-203 ರೈಪಲ್ ಗಳು ಹೆಚ್ಚಿನ ಕಾರ್ಯಕ್ಷಮತೆಯನ್ನು ಹೊಂದಿವೆ.
ಕೈಯಿಂದ ನಿರ್ವಹಣೆ ಮಾಡಲಾಗುತ್ತಿದ್ದ ಆಯುಧಗಳಲ್ಲಿ ಗಣನೀಯ ಪ್ರಮಾಣದಲ್ಲಿ ಬದಲಾವಣೆ ಮಾಡಲಾಗಿದ್ದು, ಶಸಾಸ್ತ್ರಗಳನ್ನು ಮೇಲ್ದರ್ಜೇರಿಸಲು ಎನ್ ಡಿಎ ಸರ್ಕಾರ ಆದ್ಯತೆ ನೀಡಿದೆ ಎಂದು ಅವರು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com