'ಪಶ್ಚಿಮ ಬಂಗಾಳ ಪೊಲೀಸರ ಮೇಲೆ ನಮಗೆ ವಿಶ್ವಾಸವಿಲ್ಲ, ಕೇಂದ್ರ ಪಡೆಗಳ ಮೇಲ್ವಿಚಾರಣೆಯಲ್ಲಿ ಮತದಾನ ನಡೆಯಲಿ'

ಪಶ್ಚಿಮ ಬಂಗಾಳದಲ್ಲಿ ಲೋಕಸಭಾ ಚುನಾವಣೆಯನ್ನು ಕೇಂದ್ರ ಪಡೆಗಳ ಮೇಲ್ವಿಚಾರಣೆಯಲ್ಲಿ ನಡೆಸಬೇಕೆಂದು...
ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಪಶ್ಚಿಮ ಬಂಗಾಳ ಪೊಲೀಸರು (ಸಂಗ್ರಹ ಚಿತ್ರ)
ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಪಶ್ಚಿಮ ಬಂಗಾಳ ಪೊಲೀಸರು (ಸಂಗ್ರಹ ಚಿತ್ರ)
ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಲೋಕಸಭಾ ಚುನಾವಣೆಯನ್ನು ಕೇಂದ್ರ ಪಡೆಗಳ ಮೇಲ್ವಿಚಾರಣೆಯಲ್ಲಿ ನಡೆಸಬೇಕೆಂದು ಬಿಜೆಪಿ ಚುನಾವಣಾ ಆಯೋಗಕ್ಕೆ ಮನವಿ ಮಾಡಲು ಮುಂದಾಗಿದೆ. 
ಚುನಾವಣಾ ಅಧಿಕಾರಿಗಳನ್ನು ಭೇಟಿ ಮಾಡಲಿರುವ ಬಿಜೆಪಿ ನಾಯಕರು, ಪಶ್ಚಿಮ ಬಂಗಾಳದ ಪೊಲೀಸರ ಮೇಲೆ ನಮಗೆ ನಂಬಿಕೆ ಇಲ್ಲ. ಆದ್ದರಿಂದ ಕೇಂದ್ರ ಪಡೆಗಳ ಮೇಲ್ವಿಚಾರಣೆಯಲ್ಲಿ ಮತದಾನ ಪ್ರಕ್ರಿಯೆ ನಡೆಯಬೇಕೆಂದು ಮನವಿ ಮಾಡಲಿದ್ದಾರೆ. ಸಂಜೆ 5 ಗಂಟೆಗೆ ಚುನಾವಣಾಧಿಕಾರಿಗಳು ಹಾಗೂ ರಾಜಕೀಯ ಪಕ್ಷಗಳ ನಾಯಕರ ಸಭೆ ನಡೆಯಲಿದೆ. ಚುನಾವಣೆ ದಿನಾಂಕ ಘೋಷಣೆಯಾದ ಮರುದಿನವೇ ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಮತದಾರರಿಗೆ ಬೆದರಿಕೆ ಹಾಕುತ್ತಿದೆ, ಪಶ್ಚಿಮ ಬಂಗಾಳದಲ್ಲಿ ಪ್ರಜಾಪ್ರಭುತ್ವ ಇಲ್ಲ ಎಂದು ಬಿಜೆಪಿ ಆರೋಪಿಸಿತ್ತು. 
ಚುನಾವಣೆ ಘೋಷಣೆಯಾಗುತ್ತಿದ್ದಂತೆಯೇ ಕೋಲ್ಕತ್ತಾ ಮೇಯರ್ ಸಹ ವಿಚಿತ್ರ ಹೇಳಿಕೆಗಳನ್ನು ನೀಡಿದ್ದರು. " ಚುನಾವಣೆ ನಡೆಸಲು ಬರುವ ಸಿಆರ್ ಪಿಎಫ್ ಸಿಬ್ಬಂದಿಗಳು 2 ದಿನ ಬರುತ್ತಾರೆ ಉಳಿದ ದಿನಗಳಲ್ಲಿ ಜನರು ರಾಜ್ಯ ಪೊಲೀಸರನ್ನೇ ಅವಲಂಬಿಸಬೇಕಾಗುತ್ತದೆ ಎಂದು ಹೇಳಿದ್ದರು. ಇದೇ ಹೇಳಿಕೆಯನ್ನು ಆಧಾರವಾಗಿಟ್ಟುಕೊಂಡು ಈಗ ಬಿಜೆಪಿ ಪಶ್ಚಿಮ ಬಂಗಾಳದಲ್ಲಿನ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಪೊಲೀಸರನ್ನು ರಾಜಕೀಯವಾಗಿ ಬಳಕೆ ಮಾಡಿಕೊಳ್ಳುವ ಸಾಧ್ಯತೆ ಇದೆ. ಪೊಲೀಸರನ್ನು ಮುಂದಿಟ್ಟುಕೊಂಡು ಟಿಎಂಸಿ ಮತದಾರರಿಗೆ ಬೆದರಿಕೆ ಹಾಕುತ್ತಿದೆ. ಆದ್ದರಿಂದ ಮತದಾನ ಪ್ರಕ್ರಿಯೆ ಕೇಂದ್ರಪಡೆಗಳ ಮೇಲ್ವಿಚಾರಣೆಯಲ್ಲಿ ನಡೆಯಲಿ ಎಂದು ಮನವಿ ಮಾಡಲಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com