ಯಾವುದೇ ರಾಜ್ಯಗಳಲ್ಲೂ ಕಾಂಗ್ರೆಸ್ ಜೊತೆ ಮೈತ್ರಿ ಇಲ್ಲ: ಮಾಯಾವತಿ

ಮೋದಿ ವಿರುದ್ಧ ಮಹಾಘಟಬಂಧನ್ ನ್ನು ರಚಿಸಲು ಹರಸಾಹಸ ಮಾಡುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಭಾರಿ ಹಿನ್ನಡೆಯುಂಟಾಗಿದೆ. ಲೋಕಸಭಾ ಚುನಾವಣೆ ಘೋಷಣೆಯಾದ ನಂತರ ಕಾಂಗ್ರೆಸ್ ಗೆ ಬಿಎಸ್ ಪಿ
ಯಾವುದೇ ರಾಜ್ಯಗಳಲ್ಲೂ ಕಾಂಗ್ರೆಸ್ ಜೊತೆ ಮೈತ್ರಿ ಇಲ್ಲ: ಮಾಯಾವತಿ
ಯಾವುದೇ ರಾಜ್ಯಗಳಲ್ಲೂ ಕಾಂಗ್ರೆಸ್ ಜೊತೆ ಮೈತ್ರಿ ಇಲ್ಲ: ಮಾಯಾವತಿ
ನವದೆಹಲಿ: ಮೋದಿ ವಿರುದ್ಧ ಮಹಾಘಟಬಂಧನ್ ನ್ನು ರಚಿಸಲು ಹರಸಾಹಸ ಮಾಡುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಭಾರಿ ಹಿನ್ನಡೆಯುಂಟಾಗಿದೆ. ಲೋಕಸಭಾ ಚುನಾವಣೆ ಘೋಷಣೆಯಾದ ನಂತರ ಕಾಂಗ್ರೆಸ್ ಗೆ ಬಿಎಸ್ ಪಿ ನಾಯಕಿ ಮಾಯಾವತಿ ಮತ್ತೊಂದು ಶಾಕ್ ನೀಡಿದ್ದಾರೆ.
ಏ.11 ರಂದು ನಡೆಯಲಿರುವ ಮೊದಲ ಹಂತದ ಚುನಾವಣೆಯಲ್ಲಿ ಯಾವುದೇ ರಾಜ್ಯಗಳಲ್ಲೂ ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಮಾಯಾವತಿ ಸ್ಪಷ್ಟಪಡಿಸಿದ್ದಾರೆ. 
ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವುದರ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಮಾಯಾವತಿ, ಯಾವುದೇ ರಾಜ್ಯಗಳಲ್ಲೂ ಕಾಂಗ್ರೆಸ್ ಜೊತೆ ಚುನಾವಣಾ ಮೈತ್ರಿ ಮಾಡಿಕೊಳ್ಳುವುದಿಲ್ಲ" ಎಂದು ಹೇಳಿದ್ದಾರೆ. 
ಉತ್ತರ ಪ್ರದೇಶದಲ್ಲಿ ಪರಸ್ಪರ ಗೌರವದಿಂದ, ಪ್ರಮಾಣಿಕ ಉದ್ದೇಶದಿಂದ ಎಸ್ ಪಿ-ಬಿಎಸ್ ಪಿ ಮೈತ್ರಿ ಮಾಡಿಕೊಂಡಿವೆ. ಉತ್ತರ ಪ್ರದೇಶದಲ್ಲಿ ಬಿಜೆಪಿಯನ್ನು ಸೋಲಿಸುವುದಕ್ಕೆ ಎಸ್ ಪಿ-ಬಿಎಸ್ ಪಿ ಮೈತ್ರಿಯೇ ಸಾಕು ಎಂದು ಮಾಯಾವತಿ ಹೇಳಿದ್ದಾರೆ. 
ತಮ್ಮ ಪಕ್ಷ ಕೇವಲ ಚುನಾವಣಾ ಲಾಭಕ್ಕಾಗಿ ಏನನ್ನೂ ಮಾಡುವುದಕ್ಕೆ ಸಿದ್ಧವಿಲ್ಲ ಒಂದು ವೇಳೆ ಹಾಗೆ ಮಾಡಿದ್ದೇ ಆದಲ್ಲಿ ಅದು ಬಿಎಸ್ ಪಿ ಚಳುವಳಿಗೇ ಅಪಾಯ ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com