ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಭೀಮ್ ಆರ್ಮಿ ಮುಖ್ಯಸ್ಥ, ಬೆಂಬಲಿಗರು ಪೊಲೀಸರ ವಶಕ್ಕೆ

ನೂರಾರು ಮೋಟಾರ್ ಸೈಕಲ್ ಮೂಲಕ ರ‍್ಯಾಲಿ ನಡೆಸಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇರೆಗೆ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಅಜಾದ್ ಹಾಗೂ ಆತನ ಬೆಂಬಲಿಗರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಭೀಮ್ ಆರ್ಮಿ
ಭೀಮ್ ಆರ್ಮಿ

ಶಹರಾನ್ ಪುರ :ನೂರಾರು ಮೋಟಾರ್ ಸೈಕಲ್ ಮೂಲಕ ರ‍್ಯಾಲಿ ನಡೆಸಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇರೆಗೆ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಅಜಾದ್ ಹಾಗೂ ಆತನ ಬೆಂಬಲಿಗರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಚಂದ್ರಶೇಖರ್ ನನ್ನು ವಶಕ್ಕೆ ಪಡೆದುಕೊಳ್ಳುತ್ತಿದ್ದಂತೆ ಅನಾರೋಗ್ಯಕ್ಕೊಳಗಾದರಿಂದ ಇಲ್ಲಿನ  ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್ ತಿಳಿಸಿದ್ದಾರೆ.

ಚುನಾವಣಾ ಆಯೋಗದಿಂದ ನೀತಿ ಸಂಹಿತೆ ಘೋಷಣೆಯಾಗಿದ್ದರೂ ಮುಜಾಪರ್ ನಗರ ಕಡೆಗೆ ಮೋಟಾರ್ ಬೈಕ್ ಮತ್ತಿತರ ವಾಹನಗಳಲ್ಲಿ ರ‍್ಯಾಲಿ ನಡೆಸಲು ಯೋಜಿಸಿದ್ದರಿಂದ   ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವರು ಹೇಳಿದ್ದಾರೆ.

ಶಹರಾನ್ ಪುರ ಜಿಲ್ಲೆಯ ಡಿಯೋಬಾಂದ್ ಪೊಲೀಸರು ಚಂದ್ರಶೇಖರ್ ಹಾಗೂ ಆತನ ಬೆಂಬಲಿಗರನ್ನು ಬಂಧಿಸಿರುವುದಾಗಿ  ಅವರು ತಿಳಿಸಿದರು.

ನವದೆಹಲಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಚಂದ್ರಶೇಖರ್,  ಪ್ರಧಾನಿ ಮೋದಿ, ಕೇಂದ್ರ ಸಚಿವೆ ಸ್ಮೃತಿ ಇರಾನಿ, ವಿರುದ್ಧ ಪ್ರತಿಪಕ್ಷಗಳು ಸದೃಢ ಅಭ್ಯರ್ಥಿಗಳನ್ನು ಹಾಕುವಲ್ಲಿ ವಿಫಲರಾದರೆ ಭೀಮ್ ಆರ್ಮಿಯಿಂದ  ಬಲಾಡ್ಯ ಅಭ್ಯರ್ಥಿಗಳನ್ನು ಚುನಾವಣಾ ಕಣಕ್ಕಿಳಿಸಲಾಗುವುದು ಎಂದು ಹೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com