ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ. ಬಬ್ಬರ್, ಪ್ರಿಯಾ ದತ್, ನಾನಾ ಪಟೋಲ್ ಗೆ ಟಿಕೆಟ್

ಲೋಕಸಭಾ ಚುನಾವಣೆಗಾಗಿ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದ್ದು, ಉತ್ತರ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ರಾಜ್ ಬಬ್ಬರ್, ಮಾಜಿ ಕೇಂದ್ರ ಸಚಿವ ಶ್ರೀ ಪ್ರಕಾಶ್ ಜೈಸ್ವಾಲ್ , ಮಾಜಿ ಕೇಂದ್ರ ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ ಅವರಿಗೆ ಟಿಕೆಟ್ ನೀಡಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ:  ಲೋಕಸಭಾ ಚುನಾವಣೆಗಾಗಿ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದ್ದು, ಉತ್ತರ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ರಾಜ್ ಬಬ್ಬರ್, ಮಾಜಿ ಕೇಂದ್ರ ಸಚಿವ ಶ್ರೀ ಪ್ರಕಾಶ್ ಜೈಸ್ವಾಲ್ , ಮಾಜಿ ಕೇಂದ್ರ ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ ಅವರಿಗೆ ಟಿಕೆಟ್ ನೀಡಲಾಗಿದೆ.

ರಾಜ್ ಬಬ್ಬರ್ - ಮೊರಾದಾಬಾದ್, ಶ್ರೀ ಪ್ರಕಾಶ್ ಜೈಸ್ವಾಲ್ - ಕಾನ್ಜುರ, ಸುಶೀಲ್ ಕುಮಾರ್ ಶಿಂಧೆ- ಸೊಲಾಪುರ, ಪ್ರಿಯಾದತ್- ಮುಂಬೈಯ ಉತ್ತರ- ಸೆಂಟ್ರಲ್ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.  ಕಾಂಗ್ರೆಸ್ ಎರಡನೇ ಪಟ್ಟಿಯಲ್ಲಿ ಉತ್ತರ ಪ್ರದೇಶದಿಂದ 16, ಮಹಾರಾಷ್ಟ್ರದಿಂದ ಐವರಿಗೆ ಟಿಕೆಟ್ ನೀಡಲಾಗಿದೆ.

ಕಿಸಾನ್ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲ್- ನಾಗಪುರ, ಮಾಜಿ ಕೇಂದ್ರ ಸಚಿವ ಮಿಲಿಂದ್ ದೇವೂರ- ಮುಂಬೈ ದಕ್ಷಿಣ, ಸಂಜಯ್ ಸಿಂಗ್- ಸುಲ್ತಾನ್ ಪುರ ಮತ್ತು ಸಾವಿತ್ರಿ ಪುಲೆ - ಬಹ್ರಾಯ್ಚ್  ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ.
ಈ ಮೂಲಕ  ಚುನಾವಣೆಯಲ್ಲಿ ನಿರ್ಣಾಯಕ ಪಾತ್ರ ವಹಿಸಲಿರುವ ಉತ್ತರ ಪ್ರದೇಶದ 27 ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್ ಪಕ್ಷ ಘೋಷಿಸಿದಂತಾಗಿದೆ. ಮಾರ್ಚ್ 7 ರಂದು ಕಾಂಗ್ರೆಸ್ ಪಕ್ಷದ ಮೊದಲ ಪಟ್ಟಿ ಬಿಡುಗಡೆಯಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com