ಮುಂಬೈ: ಪಾದಚಾರಿ ಮೇಲ್ಸುತುವೆ ಕುಸಿತ, ಉನ್ನತ ಮಟ್ಟದ ತನಿಖೆಗೆ ಪಡ್ನವೀಸ್ ಆದೇಶ

ಛತ್ರಪತಿ ಶಿವಾಜಿ ಮಹಾರಾಜ ರೈಲು ನಿಲ್ದಾಣ ಬಳಿಯ ಪಾದಚಾರಿ ಮೇಲ್ಸುತುವೆ ಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿಕೆಯಾಗಿದ್ದು, ಪಾದಚಾರಿ ಮೇಲ್ಸುತುವೆಗಳ ಸುರಕ್ಷತೆ ಬಗ್ಗೆ ಮತ್ತೊಮ್ಮೆ ಪ್ರಶ್ನೆ ಎಳುವಂತೆ ಮಾಡಿದೆ.

Published: 14th March 2019 12:00 PM  |   Last Updated: 15th March 2019 12:10 PM   |  A+A-


CM Devendra Fadnavis

ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್

Posted By : ABN
Source : ANI
ಮುಂಬೈ: ಛತ್ರಪತಿ ಶಿವಾಜಿ ಮಹಾರಾಜ ರೈಲು ನಿಲ್ದಾಣ ಬಳಿಯ ಪಾದಚಾರಿ ಮೇಲ್ಸುತುವೆ ಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿಕೆಯಾಗಿದ್ದು, ಪಾದಚಾರಿ ಮೇಲ್ಸುತುವೆಗಳ ಸುರಕ್ಷತೆ ಬಗ್ಗೆ ಮತ್ತೊಮ್ಮೆ ಪ್ರಶ್ನೆ ಎಳುವಂತೆ ಮಾಡಿದೆ.

ಮೃತರನ್ನು ಅಪೂರ್ವ ಪ್ರಭು (35) ರಂಜನ್ ತಾಂಬೆ (40) ಜಾಹೀದ್ ಶಿರಾಜ್ ಖಾನ್ (32) ಸಾರಿಕಾ ಕುಲಕರ್ಣಿ (35) ತಪೇಂದ್ರ ಸಿಂಗ್ (35) ಎಂದು ಗುರುತಿಸಲಾಗಿದೆ. ಈ ದುರಂತದಲ್ಲಿ ಮೃತಪಟ್ಟ ಮೂವರು ಮಹಿಳೆಯರ ಪೈಕಿಯಲ್ಲಿ ಇಬ್ಬರು ಜಿಟಿ ಆಸ್ಪತ್ರೆಯ ಸಿಬ್ಬಂದಿಯಾಗಿದ್ದಾರೆ

ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ರಾಜನಾಥ್ ಸಿಂಗ್   ತೀವ್ರ ದು:ಖ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳ ಸದಸ್ಯರಿಗೆ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳು ಬೇಗನೆ ಚೇತರಿಸಿಕೊಳ್ಳಲಿ ಎಂದು ಟ್ವೀಟ್ ಮಾಡಿದ್ದಾರೆ..

ಮೃತರ ಕುಟುಂಬ ಸದಸ್ಯರಿಗೆ ತಲಾ 5 ಲಕ್ಷ ಹಾಗೂ ಗಾಯಾಳುಗಳಿಗೆ 50  ಸಾವಿರ ರೂಪಾಯಿ ಪರಿಹಾರವನ್ನು ಪ್ರಕಟಿಸಿರುವ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ , ಘಟನೆಯ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ.

ಸೇತುವೆ ಕುಸಿತ ಸುದ್ದಿ ಕೇಳಿ ತೀವ್ರ ಆಘಾತವಾಗಿದ್ದು, ಬಿಎಂಸಿ ಆಯುಕ್ತರು ಹಾಗೂ ಪೊಲೀಸ್ ಅಧಿಕಾರಿಗಳೊಂದಿಗೆ ಮಾತನಾಡಿದ್ದು,  ರೈಲ್ವೆ ಸಚಿವಾಲಯದ ಅಧಿಕಾರಿಗಳೊಂದಿಗೆ ಸೇರಿ  ರಕ್ಷಣಾ ಕಾರ್ಯಾಚರಣೆಯನ್ನು ಚುರುಕಾಗಿ ಮಾಡುವಂತೆ ಸೂಚನೆ ನೀಡಿರುವುದಾಗಿ ಅವರು ತಿಳಿಸಿದ್ದಾರೆ.
Stay up to date on all the latest ರಾಷ್ಟ್ರೀಯ news
Poll
Farmers_ride_tractors1

ರೈತರು ದೆಹಲಿಯಲ್ಲಿ ತಮ್ಮ ಗಣರಾಜ್ಯೋತ್ಸವ ದಿನದ ಟ್ರಾಕ್ಟರ್ ರ್ಯಾಲಿಯನ್ನು ನಿಲ್ಲಿಸಬೇಕೇ?


Result
ಹೌದು
ಬೇಡ
flipboard facebook twitter whatsapp