ಪ್ರತಿಪಕ್ಷಗಳು ಇವಿಎಂ ವಿರುದ್ಧ ಸುಪ್ರೀಂ ಮೊರೆ ಹೋಗಲಿವೆ: ಚಂದ್ರಬಾಬು ನಾಯ್ಡು

ಬಿಜೆಪಿ ನೇತೃತ್ವದ ಎನ್ ಡಿಎಯೇತರ ರಾಜಕೀಯ ಪಕ್ಷಗಳು ಇವಿಎಂ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋಗಲು ನಿರ್ಧರಿಸಿವೆ ಎಂದು ಆಂಧ್ರ ಪ್ರದೇಶ...
ಚಂದ್ರಬಾಬು ನಾಯ್ಡು
ಚಂದ್ರಬಾಬು ನಾಯ್ಡು
ಅಮರಾವತಿ: ಬಿಜೆಪಿ ನೇತೃತ್ವದ ಎನ್ ಡಿಎಯೇತರ ರಾಜಕೀಯ ಪಕ್ಷಗಳು ಇವಿಎಂ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋಗಲು ನಿರ್ಧರಿಸಿವೆ ಎಂದು ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ಗುರುವಾರ ಹೇಳಿದ್ದಾರೆ.
ಕಳೆದ ರಾತ್ರಿ ದೆಹಲಿಯಲ್ಲಿ ಶರದ್ ಪವಾರ್ ಅವರ ನಿವಾಸದಲ್ಲಿ ನಡೆದ ಪ್ರತಿಪಕ್ಷಗಳ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಟಿಡಿಪಿ ನಾಯಕರೊಂದಿಗೆ ನಡೆದ ಟೆಲೆಕಾನ್ಫೆರೆನ್ಸ್ ನಲ್ಲಿ ಚಂದ್ರಬಾಬು ನಾಯ್ಡು ಅವರು ತಿಳಿಸಿದ್ದಾರೆ.
ಇವಿಎಂ ವಿರುದ್ಧ ಸುಪ್ರೀಂ ಮೊರೆ ಹೋಗುವ ಬಗ್ಗೆ ಹೆಚ್ಚಿನ ಮಾಹಿತಿ ನೀಡದ ಟಿಡಿಪಿ, ಮುಂದಿನ ತಿಂಗಳ ನಡೆಯುವ ಲೋಕಸಭೆ ಚುನಾವಣೆಯಲ್ಲಿ ಇವಿಎಂ ಬದಲು ಮತಪತ್ರ ವ್ಯವಸ್ಥೆ ಜಾರಿಗೆ ತರಬೇಕು ಎಂದು ಒತ್ತಾಯಿಸಿದೆ.
ಒಂದೆರಡು ದಿನಗಳ ಹಿಂದೆಯೇ ಮುಖ್ಯ ಚುನಾವಣಾ ಆಯುಕ್ತ ಸುನೀಲ್ ಅರೋರಾ ಅವರು, ಇವಿಎಂಗಳಲ್ಲಿ ಹೆಚ್ಚಿನ ಪಕ್ಷಗಳು ನಂಬಿಕೆಯನ್ನು ಉಳಿಸಿಕೊಂಡಿವೆ. ಆದರೆ ಕೆಲವರು ಇವಿಎಂಗಳನ್ನು ತಿರುಚುತ್ತಿದ್ದಾರೆ ಎಂದು ವಿಷಾದಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com