ದುರ್ಬಲ ಮೋದಿ, ಕ್ಸೀ ಜಿನ್ ಪಿಂಗ್ ಗೆ ಹೆದರಿದ್ದಾರೆ: ರಾಹುಲ್ ಗಾಂಧಿ

ಜಾಗತಿಕ ಉಗ್ರ ಪಟ್ಟಿಗೆ ಜೈಷ್ ಇ ಮೊಹಮದ್ ಉಗ್ರ ಸಂಘಟನೆ ಸಂಸ್ಥಾಪಕ ಮಸೂದ್ ಅಜರ್ ನನ್ನು ಸೇರಿಸುವಲ್ಲಿ ಮೋದಿ ಸರ್ಕಾರ ವಿಫಲವಾಗಿದ್ದು, ದುರ್ಬಲ ಮೋದಿ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಗೆ ಹೆದರಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ನವದೆಹಲಿ: ಜಾಗತಿಕ ಉಗ್ರ ಪಟ್ಟಿಗೆ ಜೈಷ್ ಇ ಮೊಹಮದ್ ಉಗ್ರ ಸಂಘಟನೆ ಸಂಸ್ಥಾಪಕ ಮಸೂದ್ ಅಜರ್ ನನ್ನು ಸೇರಿಸುವಲ್ಲಿ ಮೋದಿ ಸರ್ಕಾರ ವಿಫಲವಾಗಿದ್ದು, ದುರ್ಬಲ ಮೋದಿ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಗೆ ಹೆದರಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ಅತ್ತ ವಿಶ್ವಸಂಸ್ಥೆಯಲ್ಲಿ ಉಗ್ರ ಮಸೂದ್ ಅಜರ್ ನನ್ನು ಜಾಗತಿಕ ಉಗ್ರ ಪಟ್ಟಿಗೆ ಸೇರಿಸುವ ಭಾರತದ ಕಾರ್ಯಕ್ಕೆ ಚೀನಾ ಮತ್ತೆ ಅಡ್ಡಿಯಾಗಿದ್ದು, ಈ ವಿಚಾರವನ್ನು ಕಾಂಗ್ರೆಸ್ ರಾಜತಾಂತ್ರಿಕ ದುರಂತ ಎಂದು ಬಣ್ಣಿಸಿತ್ತು. ಇದರ ಬೆನ್ನಲ್ಲೇ ಈ ಬಗ್ಗೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಕ್ಸಿ ಜಿನ್ ಪಿಂಗ್ ಗೆ ಮೋದಿ ಹೆದರಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.
ಉಗ್ರ ಮಸೂದ್ ಅಜರ್ ನನ್ನು ಜಾಗತಿಕ ಉಗ್ರ ಪಟ್ಟಿಗೆ ಸೇರಿಸಲು ಚೀನಾ ಅಡ್ಡಗಾಲು ಹಾಕಿದರೂ ಪ್ರಧಾನಿ ಮೋದಿ ಮಾತ್ರ ಈ ಬಗ್ಗೆ ಚೀನಾ ವಿರುದ್ಧ ಒಂದೇ ಒಂದೇ ಮಾತನ್ನೂ ಆಡಿಲ್ಲ. ಹಾಗಾದರೇ ದುರ್ಬಲ ಮೋದಿ ಚೀನಾಕ್ಕೆ ಹೆದರಿದರೇ.. ಇದೇ ಏನು ಮೋದಿ ವಿದೇಶಾಂಗ ನೀತಿ.. ಎಂದು ಟೀಕಿಸಿದ್ದಾರೆ.
ಅಂತೆಯೇ ಗುಜರಾತ್ ಗೆ ಕ್ಸಿ ಜಿನ್ ಪಿಂಗ್ ರನ್ನು ಅಹ್ವಾನಿಸಿದ್ದರ ಫಲವೇ ಇದು..? ಜಿನ್ ಪಿಂಗ್ ರನ್ನು ತಬ್ಬಿಕೊಂಡ ಪರಿಣಾಮವೇ ಇದು...? ಚೀನಾಗೆ ಮೋದಿ ಹೆದರಿದರೇ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿ ವ್ಯಂಗ್ಯವಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com