ಮುಂಬೈ: ಮೇಲ್ಸೇತುವೆ ಕುಸಿತ ಪ್ರಕರಣ, ಗೋಯೆಲ್ ರಾಜೀನಾಮೆಗೆ ಕಾಂಗ್ರೆಸ್ ಒತ್ತಾಯ

ಮುಂಬೈಯಲ್ಲಿನ ಮೇಲ್ಸೇತುವೆ ಕುಸಿತಕ್ಕೆ ಬಿಜೆಪಿ ನೇತೃತ್ವದ ಕೇಂದ್ರ ರಾಜ್ಯಸರ್ಕಾರಗಳೇ ನೇರ ಹೊಣೆಯಾಗಿದ್ದು, ರೈಲ್ವೆ ಸಚಿವ ಪಿಯೂಷ್ ಗೋಯೆಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್ ಆಗ್ರಹಿಸಿದೆ.

Published: 15th March 2019 12:00 PM  |   Last Updated: 15th March 2019 11:58 AM   |  A+A-


Piyush Goyal

ಪಿಯೂಷ್ ಗೋಯೆಲ್

Posted By : ABN ABN
Source : ANI
ನವದೆಹಲಿ: ಮುಂಬೈಯಲ್ಲಿನ ಮೇಲ್ಸೇತುವೆ ಕುಸಿತಕ್ಕೆ  ಬಿಜೆಪಿ ನೇತೃತ್ವದ ಕೇಂದ್ರ ರಾಜ್ಯಸರ್ಕಾರಗಳೇ ನೇರ ಹೊಣೆಯಾಗಿದ್ದು, ರೈಲ್ವೆ ಸಚಿವ ಪಿಯೂಷ್ ಗೋಯೆಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್ ಆಗ್ರಹಿಸಿದೆ.

ಘಟನೆಯಲ್ಲಿ ಮೃತಪಟ್ಟ ಕುಟುಂಬ ಸದಸ್ಯರಿಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದು, ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ ಎಂದಿದ್ದಾರೆ.

ಮುಂಬೈಯಲ್ಲಿನ ಮೇಲ್ಸೇತುವೆ ಕುಸಿತ ಪ್ರಕರಣದಿಂದ ಮನಸ್ಸಿಗೆ ತುಂಬಾ ನೋವಾಗಿದ್ದು, ಮೃತಪಟ್ಟ ಕುಟುಂಬ ಸದಸ್ಯರಿಗೆ ತೀವ್ರ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಬೇಗನೆ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುವುದಾಗಿ ಫೇಸ್ ಬುಕ್ ಪೋಸ್ಟ್ ಹಾಕಿದ್ದಾರೆ.

ಕಾಂಗ್ರೆಸ್ ಮುಖ್ಯ ವಕ್ತಾರ ರಣದೀಪ್ ಸುರ್ಜಿವಾಲಾ ಘಟನೆ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದು,  ಘಟನೆಯ ನೇರ ಹೊಣೆ ಹೊತ್ತು  ಪಿಯೂಷ್ ಗೋಯೆಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ.

ಮೋದಿ ಸರ್ಕಾರ ಹಾಗೂ ಮಹಾರಾಷ್ಟ್ರ ಸರ್ಕಾರದ ನಿರ್ಲಕ್ಷ್ಯದಿಂದಾಗಿ ಅಂಧೇರಿ ಸೇತುವೆ ಕುಸಿತ ಸೇರಿದಂತೆ ಪದೇ ಪದೇ ಇಂತಹ ಘಟನೆಗಳು ಮರುಕಳಿಸುತ್ತಿವೆ ಎಂದು ಅವರು ಆರೋಪಿಸಿದ್ದಾರೆ.

'
Stay up to date on all the latest ರಾಷ್ಟ್ರೀಯ news
Poll
Farmers_Protest1

ಹೊಸ ಕೃಷಿ ಕಾನೂನುಗಳ ಬಗ್ಗೆ ರೈತರನ್ನು ದಾರಿ ತಪ್ಪಿಸಲಾಗುತ್ತಿದೆಯೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp