48 ಗಂಟೆಗಳ ಮುನ್ನ ಪ್ರಣಾಳಿಕೆ ಬಿಡುಗಡೆ ಮಾಡುವುದಕ್ಕೆ ಚುನಾವಣಾ ಆಯೋಗ ಬ್ರೇಕ್

48 ಗಂಟೆಗಳ ಮುನ್ನ ರಾಜಕೀಯ ಪಕ್ಷಗಳು ಪ್ರಣಾಳಿಕೆ ಬಿಡುಗಡೆ ಮಾಡುವುದಕ್ಕೆ ಚುನಾವಣಾ ಆಯೋಗ ಬ್ರೇಕ್ ಹಾಕಿದೆ.
ಚುನಾವಣಾ ಆಯೋಗ
ಚುನಾವಣಾ ಆಯೋಗ
ನವದೆಹಲಿ: 48 ಗಂಟೆಗಳ ಮುನ್ನ ರಾಜಕೀಯ ಪಕ್ಷಗಳು ಪ್ರಣಾಳಿಕೆ ಬಿಡುಗಡೆ ಮಾಡುವುದಕ್ಕೆ ಚುನಾವಣಾ ಆಯೋಗ ಬ್ರೇಕ್ ಹಾಕಿದೆ. 
ಮಾ.16 ರಂದು ಈ ಆದೇಶ ಹೊರಡಿಸಿರುವ ಚುನಾವಣಾ ಆಯೋಗ, ಪ್ರಣಾಳಿಕೆ ಬಿಡುಗಡೆಯನ್ನೂ ಈಗ ನೀತಿ ಸಂಹಿತೆ ವ್ಯಾಪ್ತಿಗೆ ತಂದಿದೆ.
ಈ ವರೆಗೂ ಪ್ರಣಾಳಿಕೆ ಬಿಡುಗಡೆಯನ್ನು ನೀತಿ ಸಂಹಿತೆ ವ್ಯಾಪ್ತಿಗೆ ತಂದಿರಲಿಲ್ಲ. 2014 ರ ಚುನಾವಣೆಯಲ್ಲಿ ಬಿಜೆಪಿ ಮೊದಲ ಹಂತದ ಮತದಾನದ ದಿನದಂದು ಪ್ರಣಾಳಿಕೆ ಬಿಡುಗಡೆ ಮಾಡಿತ್ತು. ಈ ಬಗ್ಗೆ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ಆದರೆ ಆಗ ಚುನಾವಣಾ ಆಯೋಗ ಯಾವುದೇ ಕ್ರಮ ಕೈಗೊಂಡಿರಲಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com