ಉತ್ತರ ಪ್ರದೇಶದ ಎಲ್ಲ ಕ್ಷೇತ್ರಗಳಲ್ಲೂ ಅಭ್ಯರ್ಥಿಗಳ ಹಾಕಲು ಕಾಂಗ್ರೆಸ್ ಸ್ವತಂತ್ರವಾಗಿದೆ: ಮಾಯಾವತಿ

ಉತ್ತರ ಪ್ರದೇಶದ ಎಲ್ಲ 80 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಬಹುದು. ಈ ಬಗ್ಗೆ ತಮಗೇನೂ ತಕರಾರು ಇಲ್ಲ ಎಂದು ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಲಖನೌ: ಉತ್ತರ ಪ್ರದೇಶದ ಎಲ್ಲ 80 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಬಹುದು. ಈ ಬಗ್ಗೆ ತಮಗೇನೂ ತಕರಾರು ಇಲ್ಲ ಎಂದು ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಮಾಯಾವತಿ, ಬಿಜೆಪಿ ಮತ್ತು ಅದರ ಮೈತ್ರಿ ಕೂಟವನ್ನು ಮಣಿಸಲು ಎಸ್ ಪಿ ಮತ್ತು ಬಿಎಸ್ ಪಿ ಮೈತ್ರಿ ಕೂಟ ಶಕ್ತವಾಗಿದೆ. ನಮ್ಮ ಸ್ವಂತ ಬಲದಿಂದಲೇ ನಾವು ಬಿಜೆಪಿಯನ್ನು ಮಣಿಸುತ್ತೇವೆ. ಇದೇ ವೇಳೆ 7 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸದೇ ಇರಲು ನಿರ್ಧರಿಸಿರುವ ಕಾಂಗ್ರೆಸ್ ಪಕ್ಷದ ನಿರ್ಧಾರವನ್ನು ಪರೋಕ್ಷವಾಗಿ ಟೀಕಿಸಿರುವ ಮಾಯಾವತಿ, ಇಂತಹ ನಿರ್ಧಾರಗಳಿಂದ ಕಾರ್ಯಕರ್ತರ ದಾರಿ ತಪ್ಪಿಸಬಾರದು. ಇದರಿಂದ ಅನಗತ್ಯ ಗೊಂದಲ ವೇರ್ಪಡುತ್ತದೆ. ಕಾಂಗ್ರೆಸ್ ಪಕ್ಷ ಬೇಕಿದ್ದರೆ ಎಲ್ಲ 80 ಕ್ಷೇತ್ರಗಳಲ್ಲೂ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿ. ಈ ಬಗ್ಗೆ ತಮಗೆ ಯಾವುದೇ ರೀತಿಯ ತಕರಾರಿಲ್ಲ ಎಂದು ಹೇಳಿದ್ದಾರೆ.
ಉತ್ತರ ಪ್ರದೇಶದಲ್ಲಿ ಎಸ್ ಪಿ- ಬಿಎಸ್ ಪಿ ಮತ್ತು ಆರ್ ಎಲ್ ಡಿ ಮೈತ್ರಿಕೂಟ ಈಗಾಗಲೇ ಸೀಟು ಹಂಚಿಕೆಯನ್ನು ಅಂತಿಮಗೊಳಿಸಿದೆ. ಹೀಗಾಗಿ ಈ ಹಂತದಲ್ಲಿ ಅನಗತ್ಯ ಗೊಂದಲ ಬೇಡ ಎಂದು ಮಾಯಾವತಿ ಹೇಳಿದ್ದಾರೆ.
ಇನ್ನು ಕೇಂದ್ರದ ಗದ್ದುಗೆ ಹಿಡಿಯಲು ಪ್ರಮುಖ ಪಾತ್ರವಹಿಸುವ ಉತ್ತರಪ್ರದೇಶದ ಮೇಲೆ ಕಾಂಗ್ರೆಸ್​​​, ಬಿಜೆಪಿ ಸೇರಿದಂತೆ ಎಸ್​​ಪಿ-ಬಿಎಸ್​​​ಪಿ ಪಕ್ಷದ ಕಣ್ಣು ನೆಟ್ಟಿದೆ. ಈಗಾಗಲೇ ಮಾಜಿ ಸಿಎಂ ಮಾಯಾವತಿ ನೇತೃತ್ವದ ಬಹುಜನ ಸಮಾಜ ಪಕ್ಷ ಮತ್ತು ಸಮಾಜವಾದಿ ಪಕ್ಷ ಜಂಟಿಯಾಗಿ ಚುನಾವಣೆ ಎದುರಿಸುತ್ತಿದ್ದು, ಕಾಂಗ್ರೆಸ್​​ ಮತ್ತು ಬಿಜೆಪಿ ಎರಡು ರಾಷ್ಟ್ರೀಯ ಪಕ್ಷಗಳಿಗೆ ದಂಗುಬಡಿಸಿದಂತಾಗಿದೆ.
ಇನ್ನು ಈಗಾಗಲೇ ಮಾಯಾವತಿ ಮತ್ತು ಅಖಿಲೇಶ್ ಯಾದವ್ ಅವರು ತಲಾ 38-37 ಸೀಟು ಗಳಲ್ಲಿ ಮೈತ್ರಿ ಮೂಲಕ ಚುನಾವಣೆಗೆ ಸ್ಪರ್ಧಿಸುವುದಾಗಿ ಹೇಳಿದ್ದಾರೆ. ಅಲ್ಲದೇ ರಾಯಬರೇಲಿ ಮತ್ತು ಅಮೇಥಿ ಕ್ಷೇತ್ರಗಳನ್ನು ಕಾಂಗ್ರೆಸ್​​ಗೆ ಬಿಟ್ಟುಕೊಂಡಿದ್ದು, ಯಾವುದೇ ಮೈತ್ರಿ ಅಭ್ಯರ್ಥಿಗಳನ್ನು ಹಾಕುವುದಿಲ್ಲ ಎಂದು ಹೇಳಿದ್ದಾರೆ. ಇದಾದ ಬೆನ್ನಲ್ಲೇ ಕಾಂಗ್ರೆಸ್ ಉತ್ತರ ಪ್ರದೇಶದಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದೆ. ಜತೆಗೆ ಲೋಕಸಭೆ ಚುನಾವಣೆಯಲ್ಲಿ ಉತ್ತರಪ್ರದೇಶದ ಒಟ್ಟು 80 ಕ್ಷೇತ್ರಗಳ ಪೈಕಿ 7 ಕ್ಷೇತ್ರಗಳಲ್ಲಿ ಸ್ಪರ್ಧಿಸದೇ ಇರಲು ಕಾಂಗ್ರೆಸ್ ನಿರ್ಧರಿಸಿದೆ. ಆದರೆ, ಈ ಕ್ಷೇತ್ರಗಳನ್ನು ಸಮಾಜವಾದಿ ಪಕ್ಷ-ಬಹುಜನ ಸಮಾಜ ಪಕ್ಷಗಳ ಮೈತ್ರಿಗೆ ಬಿಟ್ಟುಕೊಡಲು ನಿರ್ಣಯಿಸಿದೆ ಎನ್ನಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com