ಆಂಧ್ರಪ್ರದೇಶ ಆಸೆಂಬ್ಲಿ ಚುನಾವಣೆ: ಎರಡು ಕ್ಷೇತ್ರಗಳಲ್ಲಿ ಪವನ್ ಕಲ್ಯಾಣ್ ಸ್ಪರ್ಧೆ

ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಪವರ್ ಸ್ಟಾರ್ ಪವನ್ ಕಲ್ಯಾಣ್ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದ್ದಾರೆ.ಭೀಮಾವರಂ ಹಾಗೂ ಗಾಜುವಾಕದಿಂದ ಅವರು ಚುನಾವಣಾ ಕಣಕ್ಕಿಳಿಯಲಿದ್ದಾರೆ.

Published: 19th March 2019 12:00 PM  |   Last Updated: 19th March 2019 07:31 AM   |  A+A-


Pawan kalyan

ಪವನ್ ಕಲ್ಯಾಣ್

Posted By : ABN ABN
Source : ANI
ಅಮರಾವತಿ: ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಪವರ್ ಸ್ಟಾರ್ ಪವನ್ ಕಲ್ಯಾಣ್ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದ್ದಾರೆ.ಭೀಮಾವರಂ ಹಾಗೂ ಗಾಜುವಾಕದಿಂದ ಅವರು ಚುನಾವಣಾ ಕಣಕ್ಕಿಳಿಯಲಿದ್ದಾರೆ.

ಆಂಧ್ರಪ್ರದೇಶದ ಒಟ್ಟಾರೇ 175 ಕ್ಷೇತ್ರಗಳ ಪೈಕಿಯಲ್ಲಿ 21 ಕ್ಷೇತ್ರಗಳಲ್ಲಿ ಬಿಎಸ್ಪಿ ಸ್ಪರ್ಧಿಸುತ್ತಿದ್ದರೆ,ಏಳು ಕ್ಷೇತ್ರಗಳಲ್ಲಿ ಸಿಪಿಐ ಮತ್ತು ಸಿಪಿಎಂ ಪಕ್ಷಗಳು ಸ್ಪರ್ಧಿಸುತ್ತಿವೆ. ಉಳಿದ ಕ್ಷೇತ್ರಗಳಲ್ಲಿ ಪವನ್ ಕಲ್ಯಾಣ್ ಸ್ಥಾಪಿಸಿರುವ ಜನಸೇನಾ  ಪಕ್ಷ ಸ್ಪರ್ಧಿಸುತ್ತಿದೆ.

ಲೋಕಸಭಾ ಚುನಾವಣೆಗೆಗಾಗಿ ಬಿಎಸ್ಪಿ, ಸಿಪಿಐ, ಸಿಪಿಎಂ ಹಾಗೂ ಜನಸೇನಾ ನಡುವಿನ ಸೀಟು ಹೊಂದಾಣಿಕೆ ಒಪ್ಪಂದ ನಿನ್ನೆ ನೆರವೇರಿತ್ತು.ಬಿಎಸ್ಪಿ ಮೂರು, ಸಿಪಿಐ ಹಾಗೂ ಸಿಪಿಎಂ ತಲಾ ಒಂದೊಂದು ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಒಪ್ಪಂದ ಮಾಡಿಕೊಂಡಿವೆ.ಉಳಿದ ಕ್ಷೇತ್ರಗಳಲ್ಲಿ ಜನ ಸೇನಾ ಪಕ್ಷ ಚುನಾವಣಾ ಕಣಕ್ಕಿಳಿಯಲಿದೆ.

ಆಂಧ್ರಪ್ರದೇಶದಲ್ಲಿ ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಯನ್ನು ಏಕಕಾಲದಲ್ಲಿ ಚುನಾವಣಾ ಆಯೋಗ ನಡೆಸುತ್ತಿದ್ದು, ಏಪ್ರಿಲ್ 11 ರಂದು ಒಂದೇ ಹಂತದಲ್ಲಿ  ವಿಧಾನಸಭಾ ಚುನಾವಣೆ ನಡೆಸುವುದಾಗಿ ಚುನಾವಣಾ ಆಯೋಗ ನಿನ್ನೆ ಪ್ರಕಟಿಸಿತ್ತು.
Stay up to date on all the latest ರಾಷ್ಟ್ರೀಯ news with The Kannadaprabha App. Download now
Poll
school

ಶಾಲೆಗಳನ್ನು ತೆರೆಯಲು ಸರ್ಕಾರ ಅನುಮತಿಸಿದರೆ ನಿಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ನೀವು ಸಿದ್ಧರಿದ್ದೀರಾ?


Result
ಹೌದು
ಇಲ್ಲ
ಇನ್ನೂ ನಿರ್ಧರಿಸಿಲ್ಲ
facebook twitter whatsapp