ಬಿಜೆಪಿ ಬಂಡಾಯ ನಾಯಕ ಶತ್ರುಘ್ನ ಸಿನ್ಹಾ ಕಾಂಗ್ರೆಸ್ ಟಿಕೆಟ್ ನಿಂದ ಸ್ಪರ್ಧೆ

ಪ್ರಧಾನಿ ನರೇಂದ್ರ ಮೋದಿ ಟೀಕಾಕಾರರಲ್ಲಿ ಗುರುತಿಸಿಕೊಂಡಿರುವ ಬಿಜೆಪಿ ಹಾಲಿ ಸಂಸದ ಶತೃಘ್ನ ಸಿನ್ಹಾ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ನಿಂದ ಸ್ಪರ್ಧಿಸುವ ಸಾಧ್ಯತೆ ಇದೆ.
ಬಿಜೆಪಿ ಬಂಡಾಯ ನಾಯಕ ಶತ್ರುಘ್ನ ಸಿನ್ಹಾ ಕಾಂಗ್ರೆಸ್ ಟಿಕೆಟ್ ನಿಂದ ಸ್ಪರ್ಧೆ
ಬಿಜೆಪಿ ಬಂಡಾಯ ನಾಯಕ ಶತ್ರುಘ್ನ ಸಿನ್ಹಾ ಕಾಂಗ್ರೆಸ್ ಟಿಕೆಟ್ ನಿಂದ ಸ್ಪರ್ಧೆ
ಬಿಹಾರ: ಪ್ರಧಾನಿ ನರೇಂದ್ರ ಮೋದಿ ಟೀಕಾಕಾರರಲ್ಲಿ ಗುರುತಿಸಿಕೊಂಡಿರುವ ಬಿಜೆಪಿ ಹಾಲಿ ಸಂಸದ ಶತೃಘ್ನ ಸಿನ್ಹಾ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ನಿಂದ ಸ್ಪರ್ಧಿಸುವ ಸಾಧ್ಯತೆ ಇದೆ. 
ಬಿಹಾರದ ಪಾಟ್ನಾ ಸಾಹಿಬ್ ಕ್ಷೇತ್ರದಿಂದ ಶತ್ರುಘ್ನ ಸಿನ್ಹಾಗೆ ಬಿಜೆಪಿ ಟಿಕೆಟ್ ಕೈತಪ್ಪುವ ಸಾಧ್ಯತೆ ಇದೆ ಆದ್ದರಿಂದ ಕಾಂಗ್ರೆಸ್ ನಿಂದ ಸ್ಪರ್ಧಿಸಲಿದ್ದಾರೆ. 
ಯಾವುದೇ ಪರಿಸ್ಥಿತಿಯಲ್ಲೂ ಸಹ ತನ್ನ ಲೋಕಸಭಾ ಕ್ಷೇತ್ರವನ್ನು ಬದಲಾವಣೆ ಮಾಡುವುದಿಲ್ಲ ಎಂದು ಶತೃಘ್ನ ಸಿನ್ಹಾ ಹೇಳಿದ್ದಾರೆ. ಪಕ್ಷದ ಯಾವುದೇ ನಿರ್ಧಾರದ ಹೊರತಾಗಿಯೂ ತಾವು ಪಾಟ್ನಾ ಸಾಹಿಬ್ ನಿಂದಲೇ ಸ್ಪರ್ಧಿಸುವುದಾಗಿ ಹೇಳಿದ್ದರು. 
ನಿರಂತರವಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದ ನಟ ಹಾಗೂ ಬಿಜೆಪಿ ನಾಯಕ ಶತೃಘ್ನ ಸಿನ್ಹಾ ಅವರ ಬದಲಿದೆ ಪಾಟ್ನಾ ಸಾಹಿಬ್ ಲೋಕಸಭಾ ಕ್ಷೇತ್ರದಿಂದ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರನ್ನು ಕಣಕ್ಕಿಳಿಸಲು ಸಿದ್ಧತೆ ನಡೆಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಶತೃಘ್ನ ಸಿನ್ಹಾ ಕಾಂಗ್ರೆಸ್ ನಿಂದ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com