ಲೋಕಸಭಾ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ವಾರಾಣಸಿಯಿಂದ ಮೋದಿ, ಗಾಂಧಿ ನಗರದಿಂದ ಅಮಿತ್ ಶಾ ಸ್ಪರ್ಧೆ

ಲೋಕಸಭಾ ಚುನಾವಣೆಗೆ ಬಿಜೆಪಿ 182 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಾ.21 ರಂದು ಬಿಡುಗಡೆ ಮಾಡಿದೆ.

Published: 21st March 2019 12:00 PM  |   Last Updated: 21st March 2019 08:27 AM   |  A+A-


BJP releases first list of candidates, PM Modi to contest from Varanasi, Amit Shah To Contest From Gandhinagar

ಬಿಜೆಪಿ ಸಭೆ ಬಳಿಕ ಕೇಂದ್ರ ಸಚಿವ ಜೆಪಿ ನಡ್ಡಾ ಸುದ್ದಿಗೋಷ್ಠಿ

Posted By : SBV SBV
Source : Online Desk
ನವದೆಹಲಿ: ಲೋಕಸಭಾ ಚುನಾವಣೆಗೆ ಬಿಜೆಪಿ 182 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಾ.21 ರಂದು ಬಿಡುಗಡೆ ಮಾಡಿದೆ. 

ಬಿಜೆಪಿ ಸಭೆ ಬಳಿಕ ಕೇಂದ್ರ ಸಚಿವ ಜೆಪಿ ನಡ್ಡಾ ಪಟ್ಟಿ ಬಿಡುಗಡೆ ಮಾಡಿದ್ದು ಪ್ರಧಾನಿ ನರೇಂದ್ರ ಮೋದಿ ವಾರಾಣಸಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಇದೇ ವೇಳೆ ಎಲ್ ಕೆ ಅಡ್ವಾಣಿ ಪ್ರತಿನಿಧಿಸುತ್ತಿದ್ದ ಗಾಂಧಿ ನಗರ ಲೋಕಸಭಾ ಕ್ಷೇತ್ರದಿಂದ ಈ ಬಾರಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸ್ಪರ್ಧಿಸಲಿದ್ದಾರೆ.

ಅಮೇಥಿ ಲೋಕಸಭಾ ಕ್ಷೇತ್ರದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರನ್ನು ಕಣಕ್ಕಿಳಿಸಲಾಗಿದೆ. ಇನ್ನು ಕೇಂದ್ರ ಸಚಿವ ವಿ.ಕೆ ಸಿಂಗ್ ಗೆ ಗಾಜಿಯಾಬಾದ್ ನಿಂದ ಟಿಕೆಟ್ ನೀಡಲಾಗಿದೆ. 

ರಾಜ್ಯದ ಲೋಕಸಭಾ ಕ್ಷೇತ್ರಗಳಿಂದ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿಯೂ ಇದೇ ವೇಳೆ ಬಿಡುಗಡೆಯಾಗಿದ್ದು ಹಾಸನ ಲೋಕಸಭಾ ಕ್ಷೇತ್ರದಿಂದ ಇತ್ತೀಚೆಗಷ್ಟೇ ಬಿಜೆಪಿಗೆ ಸೇರ್ಪಡೆಗೊಂಡ ಎ ಮಂಜುಗೆ ಟಿಕೆಟ್ ನೀಡಲಾಗಿದೆ.
Stay up to date on all the latest ರಾಷ್ಟ್ರೀಯ news with The Kannadaprabha App. Download now
Poll
school

ಶಾಲೆಗಳನ್ನು ತೆರೆಯಲು ಸರ್ಕಾರ ಅನುಮತಿಸಿದರೆ ನಿಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ನೀವು ಸಿದ್ಧರಿದ್ದೀರಾ?


Result
ಹೌದು
ಇಲ್ಲ
ಇನ್ನೂ ನಿರ್ಧರಿಸಿಲ್ಲ
facebook twitter whatsapp