ಮಾಜಿ ಪ್ರಧಾನಿಗೆ ಪ್ರಿಯಾಂಕಾ ವಾದ್ರಾ ಅವಮಾನ: ವಿಡಿಯೋ ಬಿಟ್ಟು ಬಿಜೆಪಿ ತಪರಾಕಿ!

ದೇಶದ ಹೆಮ್ಮೆಯ ಪ್ರಧಾನಿ ದಿವಂಗತ ಲಾಲ್ ಬಹದ್ದೂರ್ ಶಾಸ್ತ್ರಿಯವರನ್ನು ಅವಮಾನಿಸಿದ್ದಾರೆಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ವಿರುದ್ಧ ಕೇಂದ್ರ ಸಚಿವೆ ಸ್ಮೃತಿ ಇರಾನಿ ಆರೋಪಿಸಿದ್ದಾರೆ.

Published: 21st March 2019 12:00 PM  |   Last Updated: 21st March 2019 02:17 AM   |  A+A-


Priyanka Vadra

ಪ್ರಿಯಾಂಕಾ ವಾದ್ರಾ

Posted By : VS VS
Source : Online Desk
ನವದೆಹಲಿ: ದೇಶದ ಹೆಮ್ಮೆಯ ಪ್ರಧಾನಿ ದಿವಂಗತ ಲಾಲ್ ಬಹದ್ದೂರ್ ಶಾಸ್ತ್ರಿಯವರನ್ನು ಅವಮಾನಿಸಿದ್ದಾರೆಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ವಿರುದ್ಧ ಕೇಂದ್ರ ಸಚಿವೆ ಸ್ಮೃತಿ ಇರಾನಿ ಆರೋಪಿಸಿದ್ದಾರೆ. 

ಸ್ಮೃತಿ ಇರಾನಿ ತಮ್ಮ ಟ್ವೀಟರ್ ಖಾತೆಯಲ್ಲಿ ವಿಡಿಯೋ ಒಂದನ್ನು ಶೇರ್ ಮಾಡಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದ ಪ್ರಿಯಾಂಕಾ ಗಾಂಧಿ ತಮ್ಮ ಕೊರಳಿನಲ್ಲಿದ್ದ ಹೂವಿನ ಹಾರವನ್ನು ತೆಗೆಯುತ್ತಾರೆ. ಬಳಿಕ ಅದೇ ಹಾರವನ್ನು ಮಾಜಿ ದಿವಂಗತ ಪ್ರಧಾನಿ ಲಾಲ್ ಬಹುದ್ದೂರ್ ಶಾಸ್ತ್ರಿ ಪ್ರತಿಮೆಗೆ ಹಾಕುತ್ತಾರೆ.

ಇದನ್ನು ಖಂಡಿಸಿರುವ ಸ್ಮೃತಿ ಇರಾನಿ ಈ ಮೂಲಕ ಪ್ರಿಯಾಂಕಾ ವಾದ್ರಾ ಮಾಜಿ ಪ್ರಧಾನಿಗೆ ಅವಮಾನ ಮಾಡಿದ್ದಾರೆ. ಇದು ಕಾಂಗ್ರೆಸ್ ನ ನೈಜ ಸಂಸ್ಕೃತಿ ಎಂದು ವ್ಯಂಗ್ಯ ಮಾಡಿದ್ದಾರೆ.

ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು ಪ್ರಿಯಾಂಕಾ ವಾದ್ರಾ ಕಾಂಗ್ರೆಸ್ ಪಕ್ಷದ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಉತ್ತರ ಪ್ರದೇಶದಲ್ಲಿ ಯಾತ್ರೆ ಹಾಗೂ ಸಮಾವೇಶಗಳಲ್ಲಿ ಭಾಗಿಯಾಗಿ ಪಕ್ಷದ ಕಾರ್ಯಕರ್ತರು ಹಾಗೂ ಮತದಾರರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ.
Stay up to date on all the latest ರಾಷ್ಟ್ರೀಯ news with The Kannadaprabha App. Download now
facebook twitter whatsapp