ದೇಶದ ಪ್ರಥಮ ಲೋಕಪಾಲರಾಗಿ ನ್ಯಾ. ಪಿನಾಕಿ ಚಂದ್ರ ಘೋಷ್ ಅಧಿಕಾರ ಸ್ವೀಕಾರ

ಲೋಕ್ ಪಾಲ್ ಸಂಸ್ಥೆಯ ಮೊದಲ ಅಧ್ಯಕ್ಷರಾಗಿ ಶನಿವಾರ ಪ್ರಮಾಣವಚನ ಸ್ವೀಕರಿಸಿದ ನ್ಯಾಯಮೂರ್ತಿ ಪಿಣಕಿ ಚಂದ್ರ ಘೋಷ್ ಅವರಿಗೆ ರಾಷ್ಟ್ರಪತಿ ರಾಮ ನಾಥ್...

Published: 23rd March 2019 12:00 PM  |   Last Updated: 23rd March 2019 01:57 AM   |  A+A-


Justice Pinaki Ghose takes oath as the first Lokpal of India on 23 March 2019.

ಮೊದಲ ಲೋಕಪಾಲ್ ಸಂಸ್ಥೆಯ ಮುಖ್ಯಸ್ಥರಾಗಿ ಪ್ರಮಾಣ ವಚನ ಸ್ವೀಕರಿಸಿದ ನ್ಯಾಯಮೂರ್ತಿ ಪಿನಾಕಿ ಚಂದ್ರ ಘೋಷ್

Posted By : SUD SUD
Source : PTI
ನವದೆಹಲಿ: ಲೋಕಪಾಲ ಸಂಸ್ಥೆಯ ಮೊದಲ ಮುಖ್ಯಸ್ಥರಾಗಿ ಶನಿವಾರ ಪ್ರಮಾಣವಚನ ಸ್ವೀಕರಿಸಿದ ನ್ಯಾಯಮೂರ್ತಿ ಪಿನಾಕಿ ಚಂದ್ರ ಘೋಷ್ ಅವರಿಗೆ ರಾಷ್ಟ್ರಪತಿ ರಾಮ ನಾಥ್ ಕೋವಿಂದ್ ಪ್ರತಿಜ್ಞಾ ವಿಧಿ ಬೋಧಿಸಿದರು.

ರಾಷ್ಟ್ರಪತಿ ಭವನದಲ್ಲಿ ಇಂದು ಬೆಳಗ್ಗೆ ನೆರವೇರಿದ ಸರಳ ಸಮಾರಂಭದಲ್ಲಿ ನ್ಯಾಯಮೂರ್ತಿ ಪಿಣಕಿ ಚಂದ್ರ ಅವರು ಲೋಕಪಾಲ್ ಪ್ರಮಾಣವಚನ ಸ್ವೀಕರಿಸಿ ಮೊದಲ ಅಧ್ಯಕ್ಷರಾಗಿ ನೇಮಕಗೊಂಡರು.

ಸುಪ್ರೀಂ ಕೋರ್ಟ್ ನ ಮಾಜಿ ನ್ಯಾಯಾಧೀಶರಾಗಿದ್ದ ನ್ಯಾಯಮೂರ್ತಿ ಪಿನಾಕಿ ಚಂದ್ರ ಮೊನ್ನೆ 19ರಂದು ದೇಶದಲ್ಲಿ ಮೊದಲ ಬಾರಿಗೆ ಅಸ್ಥಿತ್ವಕ್ಕೆ ಬಂದಿರುವ ಲೋಕಪಾಲ್ ಸಂಸ್ಥೆಯ ಅಧ್ಯಕ್ಷರಾಗಿ ನೇಮಕಗೊಂಡಿದ್ದರು.

ಲೋಕಪಾಲ್ ಸಂಸ್ಥೆ ಒಂದು ಭ್ರಷ್ಟಾಚಾರ ವಿರೋಧಿ ಸಾರ್ವಜನಿಕ ತನಿಖಾ ಸಂಸ್ಥೆಯಾಗಿದೆ.

ಕಾರ್ಯಕ್ರಮದಲ್ಲಿ ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ್ದರು.
Stay up to date on all the latest ರಾಷ್ಟ್ರೀಯ news with The Kannadaprabha App. Download now
Poll
'Nationalism', 'citizenship', 'demonetisation' among chapters dropped from CBSE syllabus

ಹಿರಿಯ ತರಗತಿಗಳ ಪಠ್ಯಕ್ರಮವನ್ನು 30% ರಷ್ಟು ಕಡಿಮೆ ಮಾಡುವ ಸಿಬಿಎಸ್‌ಇ ನಡೆ ಸರಿಯೇ?


Result
ಸರಿ
ತಪ್ಪು
ಗೊತ್ತಿಲ್ಲ
flipboard facebook twitter whatsapp