ವೈನಾಡು ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ರಾಹುಲ್ ಗಾಂಧಿಗೆ ಕೇರಳ ಕಾಂಗ್ರೆಸ್ ಆಹ್ವಾನ

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕರ್ನಾಟಕದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಂತೆ ಕೆಪಿಸಿಸಿ ಆಹ್ವಾನ ನೀಡಿದ ಬೆನ್ನಲ್ಲೇ ಇದೀಗ ಕೇರಳದ ವೈನಾಡು ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವಂತೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ಕೇರಳ ಕಾಂಗ್ರೆಸ್ ಆಹ್ವಾನ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಕೇರಳ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕರ್ನಾಟಕದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಂತೆ ಕೆಪಿಸಿಸಿ ಆಹ್ವಾನ ನೀಡಿದ ಬೆನ್ನಲ್ಲೇ ಇದೀಗ  ಕೇರಳದ ವೈನಾಡು ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವಂತೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ಕೇರಳ ಕಾಂಗ್ರೆಸ್ ಆಹ್ವಾನ ನೀಡಿದೆ.

ಪಥನಂತಿಟ್ಟ ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಓಮನ್ ಚಾಂಡಿ, ವೈನಾಡು ಕ್ಷೇತ್ರದಿಂದ  ಚುನಾವಣೆಗೆ ಸ್ಪರ್ಧಿಸುವಂತೆ ರಾಹುಲ್ ಗಾಂಧಿ ಅವರನ್ನು ಕೋರಲಾಗಿದೆ. ಆದರೆ, ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದರು.

ರಾಹುಲ್ ಗಾಂಧಿ ದಕ್ಷಿಣ ಭಾರತದ ಯಾವುದಾದರೊಂದು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಪಕ್ಷದ ಕಾರ್ಯಕರ್ತರು ಒತ್ತಡ ಹಾಕುತ್ತಿದ್ದಾರೆ. ವೈನಾಡು ಕ್ಷೇತ್ರದಿಂದ ಸ್ಪರ್ಧಿಸುವಂತೆ ನಾವು ಕೂಡಾ ರಾಹುಲ್ ಗಾಂಧಿ ಅವರ ಕೇಳಿಕೊಂಡಿದ್ದೇವೆ ಎಂದು ತಿಳಿಸಿದರು.

ಕೇರಳದ 20 ಲೋಕಸಭಾ ಕ್ಷೇತ್ರಗಳ ಪೈಕಿ 16 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ಪರ್ಧಿಸುತ್ತಿದೆ. ಈಗಾಗಲೇ 14 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಘೋಷಿಸಲಾಗಿದೆ. ಆದರೆ, ವೈನಾಡು ಮತ್ತು ವಾಡಾಕಾರ ಕ್ಷೇತ್ರಗಳ ಅಭ್ಯರ್ಥಿಗಳನ್ನು ಹೆಸರನ್ನು ಬಹಿರಂಗಗೊಳಿಸಿಲ್ಲ.

ಕಾಂಗ್ರೆಸ್  ಬಿಡುಗಡೆ ಮಾಡಿದ ಮೊದಲ ಪಟ್ಟಿಯಲ್ಲಿ ರಾಹುಲ್ ಗಾಂಧಿ ಅಮೇಥಿ ಹಾಗೂ ಸೋನಿಯಾಗಾಂಧಿ ರಾಯ್ ಬರೇಲಿಯ ಅಭ್ಯರ್ಥಿ ಎಂದು ಘೋಷಿಸಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com