60 ಅಡಿ ಬೋರ್ ವೆಲ್ ಗೆ ಬಿದ್ದಿದ್ದ 18 ತಿಂಗಳ ಮಗುವಿನ ರಕ್ಷಣೆ

ಹರಿಯಾಣದ ಹಿಸರ್‌ನಲ್ಲಿ ಬೋರ್‌ವೆಲ್‌ಗೆ ಬಿದ್ದ ಒಂದೂವರೆ ವರ್ಷದ ಮಗುವನ್ನು ರಕ್ಷಿಸಲಾಗಿದೆ. ..

Published: 23rd March 2019 12:00 PM  |   Last Updated: 23rd March 2019 11:07 AM   |  A+A-


Toddler Successfully rescued From 60 Ft Borewell in Hisar

cಮಗುವನ್ನು ರಕ್ಷಿಸಿದ ಎನ್ ಡಿ ಆರ್ ಎಫ್ ತಂಡ

Posted By : SD SD
Source : ANI
ಹಿಸಾರ್:  ಹರಿಯಾಣದ ಹಿಸರ್‌ನಲ್ಲಿ ಬೋರ್‌ವೆಲ್‌ಗೆ ಬಿದ್ದ ಒಂದೂವರೆ ವರ್ಷದ ಮಗುವನ್ನು ರಕ್ಷಿಸಲಾಗಿದೆ. 

ಮನೆ ಬಳಿ ಆಟವಾಡುತ್ತಿದ್ದ 18 ತಿಂಗಳ ಮಗು ಆಕಸ್ಮಿಕವಾಗಿ ಸುಮಾರು 60 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿತ್ತು.

ಬುಧವಾರ ಕೊಳವೆಬಾವಿಗೆ ಬಿದ್ದಿದ್ದ ಮಗುವನ್ನು ಸುಮಾರು 48 ಗಂಟೆಗಳ ಕಾರ್ಯಾಚರಣೆ ನಡೆಸಿ ಎನ್‌ಡಿಆರ್‌ಎಫ್‌ ಹಾಗೂ ಭಾರತೀಯ ಸೇನೆ ರಕ್ಷಿಸಿದೆ. ಮಗುವಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ರಕ್ಷಿಸಲಾಗಿದೆ. 

ಬುಧವಾರದ ಒಂದೂವರೆ ವರ್ಷದ ನದೀಪ್ ಆಟವಾಡುತ್ತಾ ಆಕಸ್ಮಿಕವಾಗಿ ಕೊಳವೆ ಬಾವಿಗೆ ಬಿದ್ದಿದ್ದ, ಮಗುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೊಳವೆ ಬಾವಿ ತೋಡಿ ಮುಚ್ಚದೇ ಹಾಗೆ ಬಿಟ್ಟಿದ್ದವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
Stay up to date on all the latest ರಾಷ್ಟ್ರೀಯ news
Poll
school

ರಾಷ್ಟ್ರೀಯ ಶಿಕ್ಷಣ ನೀತಿ-2020: 5 ನೇ ತರಗತಿಯವರೆಗೆ ವಿದ್ಯಾರ್ಥಿಗಳಿಗೆ ಮಾತೃಭಾಷೆಯಲ್ಲಿ ಕಲಿಸುವ ಪ್ರಸ್ತಾಪವನ್ನು ನೀವು ಬೆಂಬಲಿಸುತ್ತೀರಾ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp