ಅಭಿನಂದನ್‌ ಬಿಡ್ತೀರಾ ಇಲ್ಲ ಪಾಕ್ ಉಡಾಯಿಸಬೇಕಾ?: 12 ಕ್ಷಿಪಣಿಗಳು ಶತ್ರು ರಾಷ್ಟ್ರ ಪಾಕ್‌‌‌ನತ್ತ ಮುಖ ಮಾಡಿದ್ದೇಕೆ?

ಪಾಕ್ ಪ್ರಧಾನಿ ಇಮ್ರಾನ್ ಖಾನ್ ತಾವು ಶಾಂತಿಗಾಗಿ ಭಾರತದ ವಿಂಗ್ ಕಮಾಂಡರ್ ಅಭಿನಂದನ್ ರನ್ನು ಬಿಡುಗಡೆ ಮಾಡಲು ಸಿದ್ಧರಾಗಿದ್ದೇವೆ ಎಂದು ಹೇಳಿಕೊಂಡಿದ್ದರು.
ಅಭಿನಂದನ್ ವರ್ಧಮಾನ್
ಅಭಿನಂದನ್ ವರ್ಧಮಾನ್
ನವದೆಹಲಿ: ಪಾಕ್ ಪ್ರಧಾನಿ ಇಮ್ರಾನ್ ಖಾನ್ ತಾವು ಶಾಂತಿಗಾಗಿ ಭಾರತದ ವಿಂಗ್ ಕಮಾಂಡರ್ ಅಭಿನಂದನ್ ರನ್ನು ಬಿಡುಗಡೆ ಮಾಡಲು ಸಿದ್ಧರಾಗಿದ್ದೇವೆ ಎಂದು ಹೇಳಿಕೊಂಡಿದ್ದರು. ಆದರೆ ಅಸಲಿಗೆ ಭಾರತದ 12 ಬಲಿಷ್ಠ ಕ್ಷಿಪಣಿಗಳು ಪಾಕಿಸ್ತಾನದತ್ತ ಮುಖ ಮಾಡಿದ್ದವು ಎಂಬ ಆತಂಕದಿಂದ ಬಿಡುಗಡೆ ಮಾಡಿದೆ ಎಂಬ ವಿಚಾರ ಇದೀಗ ಬಯಲಾಗಿದೆ.
ಅಭಿನಂದನ್ ಅವರಿಗೆ ಏನಾದರೂ ತೊಂದರೆಯಾದರೆ ಪರಿಣಾಮ ನೆಟ್ಟಗಿರದು ಎಂದು ಸಂಶೋಧನೆ ಮತ್ತು ವಿಶ್ಲೇಷಣೆ(ರಾ) ವಿಭಾಗದ ಕಾರ್ಯದರ್ಶಿ ಅನಿಲ್ ಧಸ್ಮಾನಾ ಪಾಕಿಸ್ತಾನದ ಗುಪ್ತಚರ ದಳ ಐಎಸ್ಐನ ಮುಖ್ಯಸ್ಥರಿಗೆ ತಿಳಿಸಿದ್ದರು ಎಂದು ತಿಳಿದುಬಂದಿದೆ.
ಅಮೆರಿಕದ ಅಧಿಕಾರಿಗಳ ಪ್ರಕಾರ, ಧಸ್ಮಾನಾ ಅವರು ಪಾಕಿಸ್ತಾನದ ಅಧಿಕಾರಿ ಮುನೀರ್ ಜೊತೆ ಅಭಿನಂದನ್ ಬಿಡುಗಡೆಯ ಬಗ್ಗೆ ಮಾತನಾಡಿದ್ದರು. ಫೆಬ್ರವರಿ 27ರಂದು ಈ ಮಾತುಕತೆ ನಡೆದಿತ್ತು. ಭಾರತೀಯ ಸೇನಾಪಡೆಯು ರಾಜಸ್ಥಾನದಲ್ಲಿ 12 ಕ್ಷಿಪಣಿಗಳನ್ನು ನಿಯೋಜಿಸಿರುವ ಬಗ್ಗೆ ಅವರು ಮಾತನಾಡಿದ್ದರು.
ಭಾರತವು ಕ್ಷಿಪಣಿ ನಿಯೋಜಿಸಿದ್ದಕ್ಕೆ ಪ್ರತಿಯಾಗಿ ಪಾಕಿಸ್ತಾನ ಸಹ ತಿರುಗೇಟು ನೀಡಲು 13 ಕ್ಷಿಪಣಿಗಳನ್ನು ಭಾರತದತ್ತ ಮುಖ ಮಾಡಿ ಸಜ್ಜುಗೊಳಿಸಿತ್ತು. ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಹಾಗೂ ಧಸ್ಮಾನಾ ಅವರು ಅಮೆರಿಕ, ಯುಎಇ ಮತ್ತು ಸೌದಿ ಅರೇಬಿಯಾ ಸರ್ಕಾರದ ಜೊತೆಗೂ ಮಾತನಾಡಿ ಪಾಕಿಸ್ತಾನದ ಮೇಲೆ ಅಭಿನಂದನ್ ರನ್ನು ಬಿಡುಗಡೆ ಮಾಡುವಂತೆ ಒತ್ತಡ ಹೇರಲು ಹೇಳಿದ್ದರು.
ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯ ಸೇನೆಗೆ ಸಂಪೂರ್ಣ ಸ್ವತಂತ್ರ್ಯ ನೀಡಿದ್ದರ ಪರಿಣಾಮ ಭಾರತೀಯ ವಾಯುಸೇನೆ ಯುದ್ಧಕ್ಕೆ ಸನ್ನದ್ಧ ನಿರ್ಧಾರ ಕೈಗೊಂಡಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com