ಭಾರತದ ರಕ್ಷಣೆಯಲ್ಲಿ 'ಮಿಷನ್ ಶಕ್ತಿ' ಅತ್ಯಂತ ಮಹತ್ವದ ಹಜ್ಜೆ: ಪ್ರಧಾನಿ ಮೋದಿ

ಶತ್ರುರಾಷ್ಟ್ರದ ಕಣ್ಗಾವಲು ಸ್ಯಾಟೆಲೈಟ್ ಗಳನ್ನು ಹೊಡೆದುರುಳಿಸುವ ಶಕ್ತಿ ಭಾರತಕ್ಕೂ ಪ್ರಾಪ್ತವಾಗಿದ್ದು, ಭಾರತದ ರಕ್ಷಣೆಯಲ್ಲಿ 'ಮಿಷನ್ ಶಕ್ತಿ' ಅತ್ಯಂತ ಮಹತ್ವದ ಹಜ್ಜೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಪ್ರಧಾನಿ ಮೋದಿ ಭಾಷಣ
ಪ್ರಧಾನಿ ಮೋದಿ ಭಾಷಣ
ನವದೆಹಲಿ: ಶತ್ರುರಾಷ್ಟ್ರದ ಕಣ್ಗಾವಲು ಸ್ಯಾಟೆಲೈಟ್ ಗಳನ್ನು ಹೊಡೆದುರುಳಿಸುವ ಶಕ್ತಿ ಭಾರತಕ್ಕೂ ಪ್ರಾಪ್ತವಾಗಿದ್ದು, ಭಾರತದ ರಕ್ಷಣೆಯಲ್ಲಿ 'ಮಿಷನ್ ಶಕ್ತಿ' ಅತ್ಯಂತ ಮಹತ್ವದ ಹಜ್ಜೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತೀಯ ವಿಜ್ಞಾನಿಗಳು ಮಹತ್ವದ ಸಾಧನೆ ಮಾಡಿದ್ದು, ಬಾಹ್ಯಾಕಾಶದಲ್ಲಿ ಭಾರತ ಕೂಡ ಸೂಪರ್‌ ಪವರ್‌ ದೇಶವಾಗಿ ಹೊರಹೊಮ್ಮಿದೆ. ಇದುವರೆಗೆ ಅಮೆರಿಕ, ರಷ್ಯಾ ಮತ್ತು ಚೀನಾ ಮಾತ್ರ ಸಕ್ರಿಯ ಉಪಗ್ರಹವನ್ನು ಹೊಡೆದುರುಳಿಸುವ ತಂತ್ರಜ್ಞಾನ ಹೊಂದಿದ್ದವು. ಇದೀಗ  ಭಾರತವೂ ಈ ಸಾಲಿಗೆ ಸೇರಿದ್ದು. ವಿಶ್ವದ ನಾಲ್ಕನೇ ದೇಶವಾಗಿ ಈ ಸಾಧನೆ ಮಾಡಿದೆ.  ಆ ಮೂಲಕ ಭಾರತ ಕೂಡ ಸೂಪರ್ ಪವರ್‌ ದೇಶವೆನಿಸಿದೆ. 
ಈ ಬಗ್ಗೆ ಸ್ವತಃ ಪ್ರಧಾನಿ ನರೇಂದ್ರ ಮೋದಿ ಮಾಹಿತಿ ನೀಡಿದ್ದು, ಕೇವಲ 3 ನಿಮಿಷಗಳ ಅಂತರದಲ್ಲಿ ಸಕ್ರಿಯ ಉಪಗ್ರಹವೊಂದನ್ನು ಆ್ಯಂಟಿ ಸ್ಯಾಟೆಲೈಟ್ ಮಿಸೈಲ್ ಎ-ಸ್ಯಾಟ್ ಮೂಲಕ ಹೊಡೆದುರುಳಿಸಲಾಗಿದೆ. ಕೆಲ ನಿಮಿಷಗಳ ಹಿಂದಷ್ಟೇ ಭಾರತವು ಉಪಗ್ರಹ ನಿಗ್ರಹ ಕ್ಷಿಪಣಿ ಎ-ಸ್ಯಾಟ್ ಕ್ಷಿಪಣಿ ಪ್ರಯೋಗಿಸಿ ಕೆಳ ಕಕ್ಷೆಯಲ್ಲಿದ್ದ (ಭೂಮಿಯ ಸನಿಹ) ಉಪಗ್ರಹವನ್ನು ಹೊಡೆದುರುಳಿಸಲಾಗಿದೆ. 'ಮಿಷನ್ ಶಕ್ತಿ' ಯೋಜನೆಯಡಿ ನಮ್ಮ ವಿಜ್ಞಾನಿಗಳು ಈ ಸಾಧನೆ ಮಾಡಿದ್ದಾರೆ. ಕೇವಲ ಮೂರು ನಿಮಿಷಗಳಲ್ಲಿ ಕಾರ್ಯಾಚರಣೆ ಪೂರ್ಣಗೊಂಡಿದೆ ಎಂದು ಹೇಳಿದರು.
'ನಮ್ಮ ವಿಜ್ಞಾನಿಗಳು ಬಾಹ್ಯಾಕಾಶದಲ್ಲಿ 3,00 ಕಿ.ಮೀ ದೂರ (ಎಲ್‌ಇಓ) (ಲೋ ಅರ್ಥ್ ಆರ್ಬಿಟ್)ದಲ್ಲಿರುವ ಸಕ್ರಿಯ ಉಪಗ್ರಹವನ್ನು ಹೊಡೆದುರುಳಿಸಿದ್ದಾರೆ. ಕೇವಲ 3 ನಿಮಿಷಗಳಲ್ಲಿ ಯಶಸ್ವಿಯಾಗಿ ಈ ಕಾರ್ಯಾಚರಣೆಯನ್ನು ವಿಜ್ಞಾನಿಗಳು ಯಶಸ್ವಿಗೊಳಿಸಿದ್ದಾರೆ. ಮಿಷನ್ ಶಕ್ತಿ ಎಂಬ ಅತ್ಯಂತ ಕಠಿಣ ಕಾರ್ಯಾಚರಣೆ ಇದಾಗಿತ್ತು. ಅತ್ಯಂತ ಹೆಚ್ಚು ವೆಚ್ಚ ಬಯಸುವ ಈ ಕಾರ್ಯಾಚರಣೆಯನ್ನು ಅತಿ ಕಡಿಮೆ ವೆಚ್ದದಲ್ಲಿ ನಮ್ಮ ವಿಜ್ಞಾನಿಗಳು ಈ ಸಾಧನೆ ಮಾಡಿದ್ದಾರೆ. ನಮ್ಮ ವಿಜ್ಞಾನಿಗಳು ಬಾಹ್ಯಾಕಾಶದಲ್ಲಿ 3,00 ಕಿ.ಮೀ ದೂರ (ಎಲ್‌ಇಓ) (ಲೋ ಅರ್ಥ್ ಆರ್ಬಿಟ್)ದಲ್ಲಿರುವ ಶತ್ರು ದೇಶದ ಉಪಗ್ರಹವನ್ನು ಹೊಡೆದುರುಳಿಸಿದ್ದಾರೆ. ಕೇವಲ 3 ನಿಮಿಷಗಳಲ್ಲಿ ಯಶಸ್ವಿಯಾಗಿ ಈ ಕಾರ್ಯಾಚರಣೆಯನ್ನು ವಿಜ್ಞಾನಿಗಳು ಯಶಸ್ವಿಗೊಳಿಸಿದ್ದಾರೆ. ಮಿಷನ್ ಶಕ್ತಿ ಎಂಬ ಅತ್ಯಂತ ಕಠಿಣ ಕಾರ್ಯಾಚರಣೆ ಇದಾಗಿತ್ತು. ಅತ್ಯಂತ ಹೆಚ್ಚು ವೆಚ್ಚ ಬಯಸುವ ಈ ಕಾರ್ಯಾಚರಣೆಯನ್ನು ಅತಿ ಕಡಿಮೆ ವೆಚ್ಚದಲ್ಲಿ ನಮ್ಮ ವಿಜ್ಞಾನಿಗಳು ಈ ಸಾಧನೆ ಮಾಡಿದ್ದಾರೆ'. 
'ಆ್ಯಂಟಿ ಸೆಟಲೈಟ್‌- (ಎ ಸ್ಯಾಟ್‌) ಕ್ಷಿಪಣಿಯ ಯಶಸ್ದೀ ಪ್ರಯೋಗ ಭಾರತದ ಭದ್ರತೆ ವಿಷಯದಲ್ಲಿ ಮಹತ್ವದ ಸಾಧನೆಯಾಗಿದೆ. ಶತ್ರುದೇಶದ ಉಪಗ್ರಹಗಳನ್ನು ನಾಶಪಡಿಸುವ ಮಹತ್ವದ ಶಕ್ತಿ ಭಾರತಕ್ಕೀಗ ಪ್ರಾಪ್ತವಾಗಿದೆ. ಈ ಸಾಧನೆ ಮಾಡಿದ ಡಿಆರ್‌ಡಿಓ ವಿಜ್ಞಾನಿಗಳಿಗೆ ಅಭಿನಂದನೆಗಳು. ದೇಶದ ಹೆಮ್ಮೆ, ಪ್ರತಿಷ್ಠೆ ಹೆಚ್ಚಿಸಿದ ವಿಜ್ಞಾನಿಗಳಿಗೆ ಅಭಿನಂದನೆಗಳು' ಎಂದು ಪ್ರಧಾನಿ ಮೋದಿ ಹೇಳಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com