ಮಿಷನ್ ಶಕ್ತಿ ಬಗ್ಗೆ ಮೋದಿ ಮಾತು: ಚುನಾವಣಾ ಆಯೋಗ ಕ್ಲೀನ್ ಚಿಟ್

ಬಾಹ್ಯಾಕಾಶದಲ್ಲಿದ್ದ ಸಕ್ರಿಯ ಉಪಗ್ರಹವೊಂದನ್ನು ಧ್ವಂಸ ಮಾಡಿದ ವಿಚಾರವನ್ನು ಹಂಚಿಕೊಳ್ಳುವ ಮೂಲಕ ಪ್ರಧಾನಿ ಮೋದಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗ ಪ್ರಧಾನಿ ಮೋದಿಗೆ ಕ್ಲೀನ್ ಚಿಟ್ ನೀಡಿದೆ.

Published: 29th March 2019 12:00 PM  |   Last Updated: 29th March 2019 12:36 PM   |  A+A-


Mission Shakti speech row; EC gives clean chit to PM Modi

ಸಂಗ್ರಹ ಚಿತ್ರ

Posted By : SVN SVN
Source : Online Desk
ನವದೆಹಲಿ: ಮೊಟ್ಟ ಮೊದಲ ಸ್ವದೇಶಿ ನಿರ್ಮಿತ ಆ್ಯಂಟಿ ಸ್ಯಾಟೆಲೈಟ್ ಮಿಸೈಲ್  ಎ-ಸ್ಯಾಟ್ ಅನ್ನು ಯಶಸ್ವಿಯಾಗಿ ಉಡಾವಣೆ ಮಾಡಿ ಬಾಹ್ಯಾಕಾಶದಲ್ಲಿದ್ದ ಸಕ್ರಿಯ ಉಪಗ್ರಹವೊಂದನ್ನು ಧ್ವಂಸ ಮಾಡಿದ ವಿಚಾರವನ್ನು ಹಂಚಿಕೊಳ್ಳುವ ಮೂಲಕ ಪ್ರಧಾನಿ ಮೋದಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗ ಪ್ರಧಾನಿ ಮೋದಿಗೆ ಕ್ಲೀನ್ ಚಿಟ್ ನೀಡಿದೆ.

ಮಿಷನ್‌ ಶಕ್ತಿ ಯಶಸ್ಸಿನ ಬಗ್ಗೆ ಪ್ರಧಾನಿ ಮೋದಿ ಬುಧವಾರ ಮಧ್ಯಾಹ್ನರಂದು ದೇಶವನ್ನುದ್ದೇಶಿಸಿ ಭಾಷಣ ಮಾಡಿದ್ದು ನೀತಿ ಸಂಹಿತೆಯ ಉಲ್ಲಂಘನೆಯಲ್ಲ ಎಂದು ಕೇಂದ್ರ ಚುನಾವಣಾ ಆಯೋಗ ಹೇಳಿದೆ. ಲೋಕಸಭೆ ಚುನಾವಣೆಯ ಹಿನ್ನೆಲೆ ದೇಶಾದ್ಯಂತ ನೀತಿ ಸಂಹಿತೆ ಜಾರಿಯಲ್ಲಿದೆ. ಈ ಹಿನ್ನೆಲೆ, ಪ್ರಧಾನಿ ಮೋದಿ ಮಾಡಿದ ಭಾಷಣ ನೀತಿ ಸಂಹಿತೆ ಉಲ್ಲಂಘನೆಯಾಗಿದ್ಯಾ ಎಂಬ ಬಗ್ಗೆ ಚುನಾವಣಾ ಆಯೋಗ ತೀರ್ಮಾನ ಕೈಗೊಂಡಿದ್ದು, ಮೋದಿ ಭಾಷಣದಲ್ಲಿ ನೀತಿ ಸಂಹಿತೆ ಉಲ್ಲಂಘನೆಯ ಯಾವುದೇ ಅಂಶಗಳಿಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟ ಪಡಿಸಿದೆ.

ಡಿಆರ್ ಡಿಒ ವಿಜ್ಞಾನಿಗಳ ಎ - ಸ್ಯಾಟ್‌ ಯಶಸ್ಸಿನ ಬಗ್ಗೆ ದೇಶಕ್ಕೆ ಮಾಹಿತಿ ನೀಡಲು ಪ್ರಧಾನಿ ಮೋದಿ ಬುಧವಾರ ದೇಶವನ್ನುದ್ದೇಶಿಸಿ ಭಾಷಣ ಮಾಡಿದ್ದರು. ಈ ವೇಳೆ, ಉಪಗ್ರಹವೊಂದನ್ನು ಹೊಡೆದು ಹಾಕಲಾಗಿದ್ದು, ಈ ಮೂಲಕ ಭಾರತ ಬಾಹ್ಯಾಕಾಶದ ಸೂಪರ್‌ ಪವರ್ ಗಳ ಸಾಲಿಗೆ ಸೇರ್ಪಡೆಯಾಗಿದೆ ಎಂದು ಘೋಷಿಸಿದ್ದರು. ಇದು ಅಪರೂಪದ ಸಾಧನೆ ಎಂದು ಸಹ ವಿಜ್ಞಾನಿಗಳನ್ನು ಹೊಗಳಿದ್ದರು. 

ಆದರೆ ಮೋದಿ ಭಾಷಣವನ್ನು ವಿಪಕ್ಷಗಳು ಮಾತ್ರ ನೀತಿ ಸಂಹಿತೆಯ ಉಲ್ಲಂಘನೆಯಾಗುತ್ತದೆ. ಈ ಸಂಬಂಧ ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದವು. ಈ ಸಂಬಂಧ ಗುರುವಾರ ( ಮಾರ್ಚ್ 28,2019) ಮಾಹಿತಿ ನೀಡಿದ್ದ ಚುನಾವಣಾ ಆಯೋಗ, ಈ ವಿಚಾರವನ್ನು ಪರಿಶೀಲನೆ ಮಾಡುತ್ತಿದ್ದು, ಶುಕ್ರವಾರ ನಿರ್ಧಾರ ಕೈಗೊಳ್ಳುವುದಾಗಿ ಹೇಳಿತ್ತು. 

ಇದೀಗ ಈ ಪ್ರಕರಣದ ವಿಚಾರಣೆ ನಡೆಸಿದ ಆಯೋಗ, ದೂರದರ್ಶನ ಹಾಗೂ ಆಲ್‌ ಇಂಡಿಯಾ ರೇಡಿಯೋವನ್ನು ಮಾಹಿತಿ ಕೇಳಿದ್ದ ಚುನಾವಣಾ ಆಯೋಗ, ಮೋದಿ ಭಾಷಣ ಮಾಡಿದ ವೀಡಿಯೋ ಫೀಡ್‌ ಮೂಲದ ಬಗ್ಗೆ ಮಾಹಿತಿ ತೆಗೆದುಕೊಂಡಿದೆ. ದೂರದರ್ಶನ ಹಾಗೂ ಆಲ್‌ ಇಂಡಿಯಾ ರೇಡಿಯೋ ಈಗಾಗಲೇ ನಮ್ಮ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ್ದು, ಈ ಬಗ್ಗೆ ಪರಿಶೀಲನೆ ನಡೆಸುತ್ತಿದ್ದೇವೆ ಎಂದೂ ಗುರುವಾರ ತಿಳಿಸಿದ್ದರು. ಜತೆಗೆ, ದೇಶವನ್ನುದ್ದೇಶಿಸಿ ಭಾಷಣ ಮಾಡಲು ಪ್ರಧಾನಿ ಮೋದಿ ಚುನಾವಣಾ ಆಯೋಗದಿಂದ ಯಾವುದೇ ಮಾಹಿತಿ ಪಡೆದುಕೊಂಡಿಲ್ಲ ಎಂದು ತಿಳಿದುಬಂದಿದೆ. 
Stay up to date on all the latest ರಾಷ್ಟ್ರೀಯ news with The Kannadaprabha App. Download now
Poll
Priyanka gandhi

ಪ್ರಿಯಾಂಕಾ ಗಾಂಧಿಯನ್ನು ಉತ್ತರ ಪ್ರದೇಶದಲ್ಲಿ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಘೋಷಿಸಬೇಕೇ?


Result
ಹೌದು
ಬೇಡ
ಗೊತ್ತಿಲ್ಲ
facebook twitter whatsapp